Film News

ಅಭಿಮಾನಿಗಳಿಗೆ ಸಂದೇಶ ನೀಡಿದ ಮೇಘನಾ ರಾಜ್ ಸರ್ಜಾ

ಚಿರು ನಿಧನದ 10 ದಿನಗಳ ಬಳಿಕ ಆಚಾರ ಪತ್ನಿ ಮೇಘನಾ ರಾಜ್ ಚಿರುಗೆ ಭಾವನಾತ್ಮಕ ಪತ್ರ ಬರೆದಿದ್ದರು. ಇದೀಗ ಅಭಿಮಾನಿಗಳಿಗೆ ಮತ್ತೊಂದು ಪತ್ರದ ಮೂಲಕ ಧನ್ಯವಾದ ತಿಳಿಸಿದ್ದಾರೆ..

“ಎಂದೆಂದಿಗೂ ನನ್ನ ಚಿರು… ನಮ್ ಮನೆ ದೊಡ್ಡವರು..” ಎಂದು ಈ ಪತ್ರಕ್ಕೆ ಶೀರ್ಷಿಕೆ ನೀಡಿದ್ದಾರೆ.

“ಕಳೆದ ಕೆಲವು ದಿನಗಳು ನನ್ನ ಜೀವನದಿ ಅತಿ ಕಠಿಣ ಮತ್ತು ಆಘಾತಕರ. ಕಲ್ಪನೆಗೂ ಮೀರಿ ಅದ್ಭುತವಾಗಿದ್ದ ನನ್ನ ಸುಂದರ ಲೋಕ ಅಲ್ಲೋಲ ಕಲ್ಲೋಲ ಆದಾಗ, ಇನ್ನು ನನಗಾಗಿ ಏನೂ ಇಲ್ಲವೆಂದು ಅಂದುಕೊಂಡಾಗ ಕಗ್ಗತ್ತಲೆಯಲ್ಲಿ ಆಶದೀಪದ ಬೆಳಕಿನಂತೆ ಕಂಡಿದ್ದು ನನ್ನ ಕುಟುಂಬ, ಸ್ನೇಹಿತರು, ಚಿತ್ರರಂಗದ ಸಹಪಾಠಿಗಳು, ಎಲ್ಲರಿಗಿಂತ ಹೆಚ್ಚಾಗಿ ಅಭಿಮಾನಿಗಳು ತೋರಿದ ಪ್ರೀತಿ, ವಾತ್ಸಲ್ಯ, ಮಮತೆ.

ನಿಮ್ಮ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಿಮ್ಮ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಲು ಒಂದು ಜನುಮ ಸಾಲದು. ಈ ನಿಮ್ಮ ಪ್ರೀತಿಯೇ ನನಗೆ ಆಸರೆ ರಕ್ಷಾಕವಚ.

ನಾನು ಅತ್ತಾಗ, ನೀವು ನನ್ನೊಂದಿಗೆ ಕಣ್ಣೀರು ಹಾಕಿದ್ದೀರಿ, ನನ್ನ ನೋವನ್ನು ನೀವೂ ಉಂಡಿದ್ದೀರಿ, ನನ್ನಷ್ಟೇ ಚಿರು ಅವರನ್ನು ಪ್ರೀತಿಸಿದ್ದೀರಿ. ನಿಮ್ಮ ಆ ಪ್ರೀತಿಗೆ ನಾನು ಚಿರಋಣಿ. ಇಂತಹ ನೋವಿನ ಸಮಯದಲ್ಲಿ ನಿಮ್ಮ ಅಭಿಮಾನ, ಚಿತ್ರರಂಗದ ಬೆಂಬಲ ಎಲ್ಲವೂ ಚಿರು ಸಂಪಾದಿಸಿದ ಪ್ರೀತಿಯ ರಾಶಿಯ ಗುರುತು. ನಿಮ್ಮ ಅಭಿಮಾನ ಗೆದ್ದ ಅವರಿಗಿಂತ ಸಿರಿವಂತ ಇನ್ಯಾರು ಇಲ್ಲ. ನಮ್ಮ ಮನೆಯಲ್ಲಿ ‘ ಎಂದು ಕರೆಯುತ್ತಿದ್ದ ಚಿರು ಅವರನ್ನು ನಿಮ್ಮ ಮನೆ ಮಗನಂತೆ ಭಾವಿಸಿ ಇದ್ದಷ್ಟು ದಿನ ರಾಜನಂತೆ ಬದುಕಿದ್ದ ಚಿರು ಅವರನ್ನು ಸಾಲು ಸಾಲಾಗಿ ಬಂದು, ಪ್ರೀತಿಯಿಂದ ಮಹಾರಾಜನಂತೆ ಕಳುಹಿಸಿ ಕೊಟ್ಟ ನಿಮ್ಮೆಲ್ಲರಿಗೂ ನನ್ನ ನಮಸ್ಕಾರಗಳು. ಆ ಮಹಾರಾಜ ನನ್ನ ಮಡಿಲಿಗೆ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ತಿರುಗಿ ಬರುವನು..”

https://www.instagram.com/p/CBm_ZLxHmVW/?igshid=1rfkuqde2hmlp

Trending

To Top