Film News

ಇಂಡಿಯನ್ ವರ್ಲ್ಡ್ ಫಿಲ್ಮ್ ಫೆಸ್ಟಿವಲ್ ನಲ್ಲಿ ನಟಿ ಹರಿಪ್ರಿಯಾ ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ‘ಅಮೃತಮತಿ’ ಎಂಬ ಐತಿಹಾಸಿಕ ಸಿನಿಮಾದ ಪಾತ್ರಕ್ಕಾಗಿ ‘ಇಂಡಿಯನ್ ಫಿಲಂ ಫೆಸ್ಟಿವಲ್’ ನಲ್ಲಿ ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.

ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಐತಿಹಾಸಿಕ ಸಿನಿಮಾವಾಗಿದ್ದು, ಇದರಲ್ಲಿ ಹರಿಪ್ರಿಯಾ ಅಮೃತಮತಿ ಪಾತ್ರ ಮಾಡಿದ್ದರು. ಈ ಸಿನಿಮಾದಲ್ಲಿನ ಅವರ ಶ್ರೇಷ್ಠ ಅಭಿನಯಕ್ಕಾಗಿ ಪ್ರಶಸ್ತಿ ಲಭಿಸಿದೆ.

ಈ ಖುಷಿ ವಿಚಾರವನ್ನು ಹಂಚಿಕೊಂಡಿರುವ ಹರಿಪ್ರಿಯಾ ಮಹಿಳಾ ದಿನಾಚರಣೆಯಂದೇ ನನಗೆ ಈ ಮಹಿಳಾ ಪ್ರಧಾನ ಕಥಾ ವಸ್ತು ಹೊಂದಿದ್ದ ಪಾತ್ರಕ್ಕೆ ಪ್ರಶಸ್ತಿ ಸಂದಿರುವುದು ಖುಷಿ ತಂದಿದೆ. ಈ ಪ್ರಶಸ್ತಿಯನ್ನು ನನ್ನ ಅಮ್ಮ ಹಾಗೂ ಎಲ್ಲಾ ಮಹಿಳೆಯರಿಗೆ ಅರ್ಪಿಸುವುದಾಗಿ ಹೇಳಿಕೊಂಡಿದ್ದಾರೆ.
https://www.instagram.com/p/B9elytVBLBd/?igshid=1gzowm3r5rjab

Trending

To Top