Karnataka

ಈ ಎರಡು ಸಂದರ್ಭದಲ್ಲಿ ಮಾತ್ರ ನೀವು ಒಂದು ಊರಿನಿಂದ ಇನ್ನೊಂದು ಊರಿಗೆ ಸಂಚರಿಸಬಹುದು !

ಕೊರೊನಾ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರ ಮಧ್ಯೆ, ಎರಡು ಸಂದರ್ಭಗಳಲ್ಲಿ ಮಾತ್ರ ಜನರು ಒಂದೆಡೆಯಿಂದ ಮತ್ತೊಂದೆಡೆಗೆ ಪ್ರಯಾಣಿಸಲು ಅನುಮತಿ ನೀಡಲಾಗುತ್ತೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಜನರಿಗೆ ಪ್ರಯಾಣಿಸಲು ಅನುಮತಿ ನೀಡಿರುವ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಾಕ್ ಡೌನ್ ವೇಳೆ ಕುಟುಂಬದಲ್ಲಿ ಸಂಬಂಧಿಸಿದ ವ್ಯಕ್ತಿ ಯಾರಾದ್ರೂ ಸಾವನ್ನಪ್ಪಿದ್ರೆ ಅಥವಾ ಮಗು ಜನಿಸಿದರೆ ಸಂಚರಿಸಬಹುದು. ಆದರೆ ಸಂಚರಿಸಲು ಆಯಾ ಜಿಲ್ಲೆಯ ಎಸ್ಪಿ ಅನುಮತಿ ಪಡೆಯಬೇಕಾಗಿರುವುದು ಕಡ್ಡಾಯ ಅಂತಾ ಟ್ವೀಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.

Trending

To Top