Karnataka

ಎಂ.ಎಲ್.ಎ ಸುಧಾಕರ್ ಅವರ ಪತ್ನಿ ಮತ್ತು ಮಗಳಿಗೆ ಕೊರೊನಾ ಪಾಸಿಟಿವ್

ವೈದ್ಯಕೀಯ ಶಿಕ್ಷಣ ಸಚಿವರಾದ ಸುಧಾಕರ್ ಅವರ ತಂದೆಗೆ ಕೊರೊನಾ ಸೋಂಕು ಧೃಢಪಟ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದರು. ಈಗ ಅವರ ಪತ್ನಿ ಮತ್ತು ಮಗಳಿಗೂ ಕೊರೊನಾ ಸೋಂಕು ಪಾಸಿಟಿವ್ ಬಂದಿರುವುದಾಗಿ ಸಚಿವರಾದ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ವೈದ್ಯಕೀಯ ಸಚಿವ ಸುಧಾಕರ್ ಅವರು.. “ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ..” ಎಂದು ಬರೆದಿದ್ದಾರೆ.

ಇದಕ್ಕೂ ಮೊದಲು, ಜ್ವರ ಕೆಮ್ಮು ಇದ್ದ ಅವರ ತಂದೆಯನ್ನು ಪರೀಕ್ಷೆಗೆ ಮಾಡಿಸಿರುವ ಬಗ್ಗೆ ಕೂಡ ಟ್ವೀಟ್ ಮಾಡಿದ್ದರು.
“ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ…” ಎಂದು ಬರೆದಿದ್ದಾರೆ ಸಚಿವರಾದ ಸುಧಾಕರ್ ಅವರು.

ನಂತರ ಅವರ ತಂದೆಯವರ ರಿಪೋರ್ಟ್ ನಲ್ಲಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದರ ಬಗ್ಗೆಯೂ ಟ್ವೀಟ್ ಮಾಡಿದ್ದರು.
“ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ.

My father’s COVID19 test has come out positive. Anxiously waiting for reports of other family members. Praying for speedy recovery of my father..” ಎಂದು ಬರೆದಿದ್ದರು.

ಜೊತೆಗೆ ಅವರ ಮನೆಯಲ್ಲಿ ಸಹಾಯ ಮಾಡುವ ಕೆಲಸಗಾರರೊಬ್ಬರಿಗೂ ಕೋವಿಡ್19 ಸೋಂಕು ಪಾಸಿಟಿವ್ ಬಂದಿದ್ದು ಅವರೂ ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೂಡ ಟ್ವೀಟ್ ಮಾಡಿದ್ದರು.

“ನಮ್ಮ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರೂ ಕೂಡ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರೂ ಬೇಗ ಗುಣಮುಖರಾಗಲಿ ಎಂದು ನಮ್ಮ ಪ್ರಾರ್ಥನೆ…”

Trending

To Top