Film News

ಒಂದಾದ್ರು ರಾಜ್ ಬಿ ಶೆಟ್ಟಿ ಮತ್ತು ರಿಷಬ್ ಶೆಟ್ಟಿ : ಇವರಿಬ್ಬರ ಹೊಸ ಸಿನಿಮಾದ ಹೆಸರು ಹಾಗೂ ಅದರ ಪೂರ್ತಿ ಡೀಟೇಲ್ಸ್ ಇಲ್ಲಿದೆ ನೋಡಿ!

‘ಒಂದು ಮೊಟ್ಟೆಯ ಕಥೆ’ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡ ರಾಜ್ ಬಿ ಶೆಟ್ಟಿ ನಟನೆಯ ಜೊತೆ ನಿರ್ದೇಶನದಲ್ಲೂ ಕಮಾಲ್ ಮಾಡಿದ್ದರು. ಮೊದಲ ಸಿನಿಮಾದಲ್ಲಿ ಯಶಸ್ಸು ಕಂಡ ರಾಜ್ ಬಿ ಶೆಟ್ಟಿ ನಂತರ ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾ.ಶಾಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

ಅದಾದ ಮೇಲೆ ಅಮ್ಮಚ್ಚಿಯೆಂಬ ನೆನಪು, ಮಹಿರಾ, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಕಥಾ ಸಂಗಮ ಹೀಗೆ ಹಾಸ್ಯ ಪ್ರಧಾನ ಹಾಗೂ ಸಾಮಾಜಿಕ ಸಂದೇಶವುಳ್ಳ ಚಿತ್ರಗಳ ಮೂಲಕ ರಾಜ್ ಬಿ ಶೆಟ್ಟಿ ಗಮನ ಸೆಳೆದಿದ್ದರು.

ಇದೀಗ, ತಮ್ಮ ಮುಂದಿನ ಚಿತ್ರವನ್ನು ಘೋಷಣೆ ಮಾಡಿದ್ದಾರೆ.

ಪ್ರೇಮಿಗಳ ದಿನದ ವಿಶೇಷವಾಗಿ ಹೊಸ ಸಿನಿಮಾದ ಹೆಸರು ಮತ್ತು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಹೆಸರು ‘ಗರುಡ ಗಮನ ವೃಷಭ ವಾಹನ’.

ಅಂದ್ಹಾಗೆ, ಈ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದು ಜೊತೆಗೆ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶೇಷ ಅಂದ್ರೆ ರಾಜ್ ಬಿ ಶೆಟ್ಟಿ ಜೊತೆ ಖ್ಯಾತ ನಿರ್ದೇಶಕ-ನಟ ರಿಷಬ್ ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾ.ಶಾಲೆ ಹಾಗೂ ಕಥಾಸಂಗಮ ಚಿತ್ರಗಳಲ್ಲಿ ರಾಜ್ ಬಿ ಶೆಟ್ಟಿ ಅಭಿನಯಿಸಿದ್ದರು. ಈಗ ರಾಜ್ ಬಿ ಶೆಟ್ಟಿ ನಿರ್ದೇಶನದ ಚಿತ್ರದಲ್ಲಿ ರಿಷಬ್ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ಹೀಗಾಗಿ, ಈ ಸಿನಿಮಾ ಆರಂಭದಲ್ಲಿ ಕುತೂಹಲ ಮೂಡಿಸುತ್ತಿದೆ.

Trending

To Top