Karnataka

ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಬಲಿ ! ಸಾವಿನ ಸಂಖ್ಯೆ 13ಕ್ಕೆ ಏರಿಕೆ !

ಕರ್ನಾಟಕದಲ್ಲಿ ಕೊರೋನಾ ರಣ ಕೇಕೆ ಮತ್ತೆ ಮುಂದುವರಿದಿದೆ. ಇಂದು ಬೆಂಗಳೂರಿನಲ್ಲಿ ಮತ್ತೊಬ್ಬ ವ್ಯಕ್ತಿ ಕೊರೋನಾಗೆ ಬಲಿಯಾಗಿದ್ದು ಕರ್ನಾಟಕದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯನ್ನು ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು.

55 ವರ್ಷದ ವ್ಯಕ್ತಿ ಮೃತರು ಎಂದು ಗುರುತಿಸಲಾಗಿದೆ. ಈ ನಡುವೆ ಬೆಂಗಳೂರಿನಲ್ಲೇ ಅತೀ ಹೆಚ್ಚು ಸಾವುಗಳು ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇನ್ನು ಭಾರತದಲ್ಲಿ ಈವರೆಗೆ ಒಟ್ಟು 414 ಸಾವುಗಳು ಕೊರೋನಾದಿಂದ ಸಂಭವಿಸಿದೆ.

Trending

To Top