ಕೊರೋನಾ ಸಂದರ್ಭದಲ್ಲಿ ಪೊಲೀಸರ ಕರ್ತವ್ಯದ ಬಗ್ಗೆ ಸಾಕ್ಷ್ಯಚಿತ್ರ ಮಾಡಲು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಅವರು ಖ್ಯಾತ ನಿರ್ದೇಶಕ ಯೋಗರಾಜ ಭಟ್ರನ್ನು ಕರೆಸಿದ್ದಾರೆ. ಬೆಂಗಳೂರಿನ ಖಾಲಿ ರಸ್ತೆಗಳಲ್ಲಿ ಚಿತ್ರೀಕರಣ ನಡೆದಿದೆ. ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸೇರಿದಂತೆ ಸಿಬ್ಬಂದಿ ಈ ಜಾಗೃತಿ ಚಿತ್ರೀಕರಣದಲ್ಲಿ ಭಾಗಿಯಾದ್ದರು.
