News

ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ₹2 ಕೋಟಿ ಸಹಾಯಧನ ನೀಡವುದಾಗಿ ಘೋಷಿಸಿದ್ದಾರೆ ನಟ ಪವನ್ ಕಲ್ಯಾಣ್

ತೆಲುಗು ನಟ, ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಕೊರೊನಾ ವಿರುದ್ಧ ಹೋರಾಟಕ್ಕೆ ಕೈಜೋಡಿಸಿದ್ದು, ಹಣಕಾಸು ನೆರವು ನೀಡುವಲ್ಲಿ ಉದಾರತೆ ತೋರಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡೋದಾಗಿ ಪವನ್ ಕಲ್ಯಾಣ್ ಘೋಷಿಸಿದ್ದಾರೆ. ಇದರ ಜೊತೆಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸಿಎಂ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪವನ್ ಕಲ್ಯಾಣ್, ಇಂಥ ಸಂಕಷ್ಟದ ಸಮಯದಲ್ಲಿ ನಮ್ಮ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಲು ನಾನು ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡಲಿದ್ದೇನೆ. ಅವರ ಅದ್ವಿತೀಯ ಹಾಗೂ ಸ್ಫೂರ್ತಿದಾಯಕ ನಾಯಕತ್ವದಿಂದ, ಖಂಡಿತ ನಮ್ಮ ದೇಶ ಕೊರೊನಾ ಸೋಂಕನ್ನ ಮೆಟ್ಟಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

Trending

To Top