Film News

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಹರಿದಾಡುತ್ತಿದೆ ಒಂದು ಗಾಳಿ ಸುದ್ದಿ..! ತೆಲುಗು ಸಿನಿಮಾದಲ್ಲಿ ವಿಲನ್ ಆಗಲಿದ್ದಾರಾ ಡಿಬಾಸ್?

ಇತ್ತೀಚೆಗೆ ಅಲ್ಲು ಅರ್ಜುನ್ ನಟನೆಯ ‘ಪುಷ್ಟ’ ಸಿನಿಮಾ ಪೋಸ್ಟರ್ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ಖ್ಯಾತ ನಿರ್ದೇಶಕ ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಅಭಿಮಾನಿಗಳಿಗೂ ಕೂಡ ನೆಚ್ಚಿನ ನಟನ ಹೊಸ ಸಿನಿಮಾದ ಪೋಸ್ಟರ್ ನೋಡಿ ನಿರೀಕ್ಷೆ ದುಪ್ಪಟ್ಟಾಗಿದೆ. ಇಂತಹ ಖುಷಿ ವಿಚಾರದ ನಡುವೆ ‘ಪುಷ್ಟ’ ಚಿತ್ರತಂಡಕ್ಕೂ ನಟ ದರ್ಶನ್ ಸಂಬಂಧ ಇದೆ ಎಂಬ ಗಾಳಿ ಸುದ್ದಿಯೊಂದು ಹರಿದಾಡುತ್ತಿದೆ. ಅಷ್ಟಕ್ಕೂ ಈ ಸುದ್ದಿ ಹರಿದಾಡಲು ಕಾರಣವೇನು? ಇಲ್ಲಿದೆ ಮಾಹಿತಿ.

ನಟ ದರ್ಶನ್ ಮತ್ತು ‘ಪುಷ್ಟ’ ಚಿತ್ರತಂಡದೊಂದಿಗೆ ಸಂಬಂಧ ಇದೆ ಎಂಬ ಸುಳ್ಳು ಸುದ್ದಿ ಹರಿದಾಡು ಆ ಫೋಟೋವೊಂದು ಕಾರಣ. ಹೌದು. ಡಿ’ಬಾಸ್’ ‘ಪುಷ್ಟ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಲನ್ ಪಾತ್ರದಲ್ಲಿ ಮಿಂಚಲ್ಲಿದ್ದಾರೆ ಎಂಬ ಸುಳ್ಳು ಸುದ್ದಿಗಳು ಹುಟ್ಟಿಕೊಂಡಿದ್ದವು.

ಆದರೆ ಈ ಸುಳ್ಳು ಸುದ್ದಿಗೂ ಮತ್ತು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಫೋಟೋಗೂ ವಾಸ್ತವ ಸಂಗತಿ ಬೇರೆಯೇ ಇದೆ..

‘ಯಜಮಾನ’ ಸಿನಿಮಾ ಶೂಟಿಂಗ್ ವೇಳೆಯಲ್ಲಿ ಸುಕುಮಾರ್ ಅವರು ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಆ ಸಮಯದಲ್ಲಿ ಕ್ಲಿಕ್ಕಿಸಿದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆ ಫೋಟೋದ ಜೊತೆಗೆ ದರ್ಶನ್ ಅವರು ‘ಪುಷ್ಟ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಫೇಕ್ ಸುದ್ದಿಯನ್ನು ಹರಡಲಾಗುತ್ತಿದೆ.

ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಟ’ ಸಿನಿಮಾದಲ್ಲಿ ನಟ ಅಲ್ಲು ಅರ್ಜುನ್ ನಾಯಕನಾಗಿ ಕಾಣಿಸಿಕೊಂಡರೆ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ.

Trending

To Top