Film News

ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟ ರಿಷಿ ಕಪೂರ್ ವಿಧಿವಶರಾಗಿದ್ದಾರೆ

ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 67 ವರ್ಷದ ರಿಷಿ ಕಪೂರ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಹಿರಿಯ ನಟ ಮೃಪಟ್ಟಿದ್ದಾರೆ.

67 ವರ್ಷದ ರಿಷಿ ಕಪೂರ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ನಿನ್ನೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ, ಉಸಿರಾಟದ ಸಮಸ್ಯೆಯೂ ಉಂಟಾಗಿತ್ತು. ಕಳೆದ ವರ್ಷ ಕ್ಯಾನ್ಸರ್ ಕಾಣಿಸಿಕೊಂಡ ನಂತರ ರಿಷಿ ಕಪೂರ್ ಅಮೆರಿಕಕ್ಕೆ ತೆರಳಿ ಒಂದು ವರ್ಷ ಚಿಕಿತ್ಸೆ ಪಡೆದಿದ್ದರು. ಕಳೆದ ಸೆಪ್ಟೆಂಬರ್ನಲ್ಲಿ ಅವರು ಭಾರತಕ್ಕೆ ವಾಪಾಸಾಗಿದ್ದರು. ಫೆಬ್ರವರಿಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದೆಹಲಿಯಲ್ಲಿ ಕುಟುಂಬದ ಕಾರ್ಯಕ್ರಮಕ್ಕೆ ತೆರಳಿದ್ದಾಗ ಅವರಿಗೆ ಅನಾರೋಗ್ಯ ಕಾಡಿತ್ತು.

ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ರಿಷಿ ಕಪೂರ್ ನಿಧನಕ್ಕೆ ಬಾಲಿವುಡ್ ನ ಗಣ್ಯರು ಕಂಬನಿ ಮಿಡಿದಿದ್ದಾರೆ. ಹಿರಿಯ ನಟ ಅಮಿತಾಬ್ ಬಚ್ಚನ್ ತಮ್ಮ ಟ್ವೀಟರ್ ಖಾತೆಯಲ್ಲಿ ರಿಷಿ ಕಪೂರ್ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ…

https://twitter.com/SrBachchan/status/1255709029336322048?s=19

Trending

To Top