Kannada Reality Shows

ಟಿಕೆಟ್ ಟು ಫಿನಾಲೆ ಗೆದ್ದ ವಾಸುಕಿ

ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರಲ್ಲಿ ವಾಸುಕಿ ವೈಭವ್ ಮೊದಲ ಫೈನಲಿಸ್ಟ್ ಆಗಿ ಆಯ್ಕೆಯಾಗಿದ್ದಾರೆ.

ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ.

ಈ ವಾರ ಟಿಕೆಟ್ ಟು ಫಿನಾಲೆ ಸ್ಪರ್ಧೆ ನಡೆದಿತ್ತು. ಅಂದರೆ ಬಿಗ್‍ಬಾಸ್ ಕಾಲಕಾಲಕ್ಕೆ ಟಾಸ್ಕ್ ಕೊಡುತ್ತಿದ್ದರು. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್‍ಬಾಸ್ ಒಂದು ಪದಕ ಕೊಡುತ್ತಿದ್ದರು. ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ವಾರ ಪೂರ್ತಿ ಬಿಗ್‍ಬಾಸ್ ನೀಡುತ್ತಿದ್ದ ಟಾಸ್ಕ್ ಗೆಲುತ್ತಾ ವಾಸುಕಿ ವೈಭವ್ ನಾಲ್ಕು ಪದಕಗಳನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ‘ಬಿಗ್‍ಬಾಸ್ ಸೀಸನ್ 7’ ರಲ್ಲಿ ವಾಸುಕಿ ಮೊದಲ ಫೈನಲಿಸ್ಟ್ ಆಗಿ ಆಯ್ಕೆ ಆಗಿದ್ದಾರೆ.

ಬಿಗ್‍ಬಾಸ್ ನೀಡಿದ್ದ ಟಾಸ್ಕ್ ಗಳಲ್ಲಿ ವಾಸುಕಿ ವೈಭವ್ ಗೆದ್ದು ನಾಲ್ಕು ಪದಕಗಳನ್ನು ಪಡೆದುಕೊಂಡಿದ್ದರು. ಶೈನ್ ಎರಡು ಪದಕ ಗೆದ್ದಿದ್ದರು. ಅದೇ ರೀತಿ ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ ಮತ್ತು ಹರೀಶ್ ರಾಜ್ ನಾಲ್ವರು ಒಂದೊಂದು ಪದಕವನ್ನು ಗೆದ್ದಿದ್ದರು. ಆದರೆ ವಾಸುಕಿ ಉತ್ತಮವಾಗಿ ಆಟವಾಡಿ ನಾಲ್ಕು ಪದಕವನ್ನು ಗೆದ್ದುಕೊಂಡಿದ್ದಾರೆ.

ಹೀಗಾಗಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಟಿಕೆಟ್ ಅನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ. ಆದ್ದರಿಂದ ಈ ವಾರ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಆರು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

Trending

To Top