Film News

ನಟಿ ತೇಜಸ್ವಿನಿ ಪ್ರಕಾಶ್ ಅವರ ಮನೆಯಲ್ಲಿ ವಿಷಾದನೀಯ ಘಟನೆ !

ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ಸಕ್ರಿಯರಾಗಿದ್ದ ನಟಿ ತೇಜಸ್ವಿನಿ ಪ್ರಕಾಶ್ ಅವರ ಮನೆಯಲ್ಲಿ ವಿಷಾದನೀಯ ಘಟನೆಯೊಂದು ಸಂಭವಿಸಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಂದೆ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತೇಜಸ್ವಿನಿ ಬಿಗ್ ಬಾಸ್ ಕನ್ನಡ ಸೀಸನ್ 5 ನಲ್ಲಿ ಸ್ಪರ್ಧಿಸಿದ್ದರು. ಸಾಹಸಸಿಂಹ ವಿಷ್ಣುವರ್ಧನ್ ಅವರ ಜೊತೆ ವರ್ಷ ಚಿತ್ರದಲ್ಲಿ ತಂಗಿಯಾಗಿ ನಟಿಸಿದ್ದರು ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಗಜ ಚಿತ್ರದಲ್ಲಿ ತಂಗಿಯಾಗಿ ನಟಿಸಿದ್ದರು. ಈಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನನ್ನರಸಿ ರಾಧೆ ಧಾರಾವಾಹಿಯ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.

Trending

To Top