Karnataka

ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಇನ್ಫೋಸಿಸ್ ಫೌಂಡೇಷನ್‍ನಿಂದ 100 ಹಾಸಿಗೆಗಳ ಕ್ವಾರಂಟೈನ್ ಸೌಲಭ್ಯ

ಇನ್ಫೋಸಿಸ್ ಸಂಸ್ಥೆಯ ಜನೋಪಕಾರಿ ಅಂಗಸಂಸ್ಥೆಯಾಗಿರುವ ಇನ್ಫೋಸಿಸ್ ಫೌಂಡೇಷನ್ ಮತ್ತು ದೇಶದ ಅತಿ ದೊಡ್ಡ ಆರೋಗ್ಯ ರಕ್ಷಣೆ ಸೇವಾದಾರ ಸಂಸ್ಥೆಗಳಲ್ಲಿ ಒಂದಾಗಿರುವ ನಾರಾಯಣ ಹೆಲ್ತ್ ಸಹಯೋಗದಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್-19 ರೋಗಿಗಳಿಗೆ 100 ಹಾಸಿಗೆಗಳ ಕ್ವಾರಂಟೈನ್ ಸೌಲಭ್ಯವನ್ನು ನಿರ್ಮಿಸಿವೆ.

ಸಮಾಜದಲ್ಲಿನ ಆರ್ಥಿಕವಾಗಿ ಹಿಂದುಳಿದ ವರ್ಗದ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಇಲ್ಲಿ ರೋಗಿಗಳಿಗೆ ಕ್ವಾರಂಟೈನ್ ಸೌಲಭ್ಯದೊಂದಿಗೆ ನಿಗಾ ವಹಿಸುವ ವೈದ್ಯರು, ನರ್ಸ್‍ಗಳು ಮತ್ತು ಅಗತ್ಯ ಔಷಧೋಪಚಾರವನ್ನು ಸಂಪೂರ್ಣವಾಗಿ ಉಚಿತವಾಗಿ ಒದಗಿಸಲಾಗುತ್ತದೆ.

ಇಲ್ಲಿ ದಾಖಲಾಗುವ ರೋಗಿಗಳಿಗೆ ನಾರಾಯಣ ಹೆಲ್ತ್ ಸಿಟಿಯ ವೈದ್ಯರು ಮತ್ತು ನರ್ಸ್‍ಗಳು ಚಿಕಿತ್ಸೆ ನೀಡಲಿದ್ದಾರೆ ಮತ್ತು ನಿರ್ವಹಣೆ ಮಾಡಲಿದ್ದಾರೆ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಕ್ವಾರಂಟೈನ್ ಸೌಲಭ್ಯ ಮತ್ತು ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಇನ್ಫೋಸಿಸ್ ಫೌಂಡೇಷನ್‍ನ ಪ್ರಯತ್ನಗಳ ವಿಸ್ತರಣೆಯ ಮುಂದುವರಿದ ಭಾಗ ಇದಾಗಿದೆ.

Trending

To Top