Film News

ಮತ್ತೆ ಯೋಧನಾಗಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವ ರಾಜ್ ಕುಮಾರ್

‘ಹ್ಯಾಟ್ರಿಕ್ ಹೀರೊ’ ಶಿವಣ್ಣ ಅವರ ಹೊಸ ಚಿತ್ರ ಆರಂಭವಾಗುತ್ತಿದೆ. ಇತ್ತೀಚೆಗೆ ತೆರೆಕಂಡಿದ್ದ ‘ದ್ರೋಣ’ ಚಿತ್ರದಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿ ಪಾಠ ಮಾಡಿದ್ದ ಶಿವಣ್ಣ ತಮ್ಮ ಮುಂದಿನ ಚಿತ್ರದಲ್ಲಿ ದೇಶದ ಗಡಿ ಕಾಯುವ ಯೋಧನಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಹಿಂದೆ ಶಿವಣ್ಣ ‘ಮಾಸ್‌ ಲೀಡರ್‌’ ಚಿತ್ರದಲ್ಲಿ ಸೇನಾ ಕ್ಯಾಪ್ಟನ್‌ ಆಗಿ ನಟಿಸಿದ್ದರು. ಶಿವಣ್ಣ ಜತೆಗೆ ವಿಜಯರಾಘವೇಂದ್ರ ಮತ್ತು ಗುರು ಜಗ್ಗೇಶ್‌ ಯೋಧರಾಗಿ ಅಭಿನಯಿಸಿದ್ದರು.

ತೆಲುಗಿನ ನಿರ್ದೇಶಕ ರಾಮ್ ಧುಲಿಪುಡಿ ಈ ಚಿತ್ರಕ್ಕೆ ಆಯಕ್ಷನ್‌ ಕಟ್‌ ಹೇಳಲಿದ್ದಾರೆ. ವರನಟ ಡಾ.ರಾಜ್‌ ಹುಟ್ಟುಹಬ್ಬದಂದು ಶಿವಣ್ಣನ ಹೊಸ ಚಿತ್ರ ಘೋಷಿಸಲಾಗಿದೆ. ಚಿತ್ರದ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲವನ್ನು ಚಿತ್ರತಂಡ ಕಾಯ್ದುಕೊಂಡಿದ್ದು, ಉಳಿದ ಕಲಾವಿದರ ಆಯ್ಕೆ ನಡೆಸುತ್ತಿದೆ.

ಭಾವನಾತ್ಮಕ ವಿಚಾರಗಳೊಂದಿಗೆ ಪ್ರೀತಿಯನ್ನು ಎತ್ತಿಹಿಡಿಯುವ ಕಥಾಹಂದರ ಇದರಲ್ಲಿದೆಯಂತೆ. ತೆಲುಗಿನಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ, ಚಿತ್ರಕಥೆ, ಸಂಭಾಷಣೆ ಬರಹಗಾರರಾಗಿ ಹೆಸರು ಮಾಡಿರುವ ರಾಮ್ ಧುಲಿಪುಡಿ ಮೊದಲ ಬಾರಿಗೆ ಕನ್ನಡದಲ್ಲಿ ನಿರ್ದೇಶನ ಮಾಡುತ್ತಿರುವ ಚಿತ್ರವಿದು.

ಶ್ರೀಚರಣ್ ಪಕಲ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ರವಿಕುಮಾರ್ ಸನಾ ಛಾಯಾಗ್ರಹಣವಿರಲಿದೆ. ಬಾಲಶ್ರೀರಾಂ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಮತ್ತು ನರಲ ಶ್ರೀನಿವಾಸ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಕುಡಿಪುಡಿ ವಿಜಯ್ ಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

Trending

To Top