Film News

ಸೆನ್ಸೇಷನಲ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ನಟಿಸಲಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್!

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಈ ವರ್ಷ ಯುವರತ್ನ, ಜೇಮ್ಸ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅದರ ಹೊರತಾಗಿ ಅವರು ಹೊಸ ಸಿನಿಮಾವೊಂದನ್ನು ಮಾಡುತ್ತಾರಂತೆ. ಹಾಗಂತ ಸಂದರ್ಶನವೊಂದರಲ್ಲಿ ಅವರೇ ಹೇಳಿಕೊಂಡಿದ್ದಾರೆ.

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜತೆಗೆ ಪುನೀತ್ ಹೊಸ ಸಿನಿಮಾ ಮಾಡುತ್ತಾರಂತೆ. ಹಲವು ಸಮಯದ ಮೊದಲೇ ನಮ್ಮಿಬ್ಬರ ನಡುವೆ ಸಿನಿಮಾ ಮಾತುಕತೆ ನಡೆದಿತ್ತು. ಆದರೆ ಅದು ಕೈಗೂಡಿರಲಿಲ್ಲ. ಆದರೆ ಮುಂದೆ ನಾನು ಅವರ ನಿರ್ದೇಶನದಲ್ಲಿ ಒಂದು ಸಿನಿಮಾ ಮಾಡಲಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಪುನೀತ್ ಯುವರತ್ನ ಸಿನಿಮಾ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ಅದಲ್ಲದೆ ಜೇಮ್ಸ್ ಚಿತ್ರೀಕರಣ ಹಂತದಲ್ಲಿದೆ. ಇದಾದ ಬಳಿಕ ಪ್ರಶಾಂತ್ ನೀಲ್ ಕೂಡಾ ಕೆಜಿಎಫ್ ಸಿನಿಮಾ ಮುಗಿಸಬಹುದು. ಅದಾದ ಬಳಿಕ ಇಬ್ಬರೂ ಹೊಸ ಸಿನಿಮಾ ಮಾಡಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

Trending

To Top