Film News

ಮಾ.24 ರಿಂದ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ!

ಬೆಂಗಳೂರು: ಇದೇ ಮಾರ್ಚ್ 24 ರಿಂದ 31 ರವರೆಗೆ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಿಎಂ ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿ ಸಭೆಯಲ್ಲಿ ಮಾರ್ಚ್ ೨೪ ರಿಂದ ೩೧ ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಲು ತೀರ್ಮಾನಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ ೧೩ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಮುಖ್ಯವಾಗಿ ಈ ಬಾರಿ ಭಾರತೀಯ ಪ್ರದರ್ಶನ ಕಲೆಗಳ ಮಹತ್ವ ಎಂಬ ವಿಷಯದ ಮೇಲೆ ಚಿತ್ರೋತ್ಸವ ನಡೆಯಲಿದೆ ಎನ್ನಲಾಗುತ್ತಿದೆ.

ಇನ್ನೂ ಈ ಬಾರಿ ಕೋವಿಡ್ ನಿಯಮಾವಳಿಗಳಂತೆ ಚಿತ್ರೋತ್ಸವ ಕಾರ್ಯಕ್ರಮವನ್ನು ನಡೆಯಬೇಕೆಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಭಾರತದಲ್ಲೇ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದೆ. ಜೊತೆಗೆ ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದಿದೆ. ೫೦ ಕ್ಕೂ ಹೆಚ್ಚು ದೇಶಗಳ ಸುಮಾರು ೨೦೦ಕ್ಕೂ ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತದೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್ ನಲ್ಲಿನ ಪಿವಿಆರ್ ಚಿತ್ರಮಂದಿರದ ೧೧ ಸ್ಕ್ರೀನ್‌ಗಳಲ್ಲಿ ೨೦೦ ಸಿನೆಮಾಗಳನ್ನು ಪ್ರದರ್ಶನ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ಇದೇ ಸಂದರ್ಭದಲ್ಲಿ ೧೩ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಚನವನ್ನು ಸಿಎಂ ಯಡಿಯೂರಪ್ಪರವರು ಬಿಡುಗಡೆ ಮಾಡಿದರು. ಈ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜೈರಾಜ್, ಹಿರಿಯ ಕಲಾವಿದೆ ಶ್ರುತಿ, ತಾರಾ ಅನುರಾಧ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Trending

To Top