News

ಬೆಂಗಳೂರಿನ ನಿಮಾನ್ಸ್ ನಲ್ಲಿ ನೇಮಕಾತಿ, 161 ನರ್ಸಿಂಗ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ…..!

ಬೆಂಗಳೂರಿನ ಪ್ರತಿಷ್ಟಿತ ನಿಮಾನ್ಸ್ (ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ-NIMHANS) ನಲ್ಲಿ ಖಾಲಿಯಿರುವಂತಹ 161 ನರ್ಸಿಂಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಬಂದಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್‌.ಸಿ ಹಾಗೂ ಮಿಡ್ ವೈಫ್ ನರ್ಸ್‌ಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ನಿಮಾನ್ಸ್ ನಲ್ಲಿ 161 ನರ್ಸಿಂಗ್ ಹುದ್ದೆಗಳ ಖಾಲಿಯಿದ್ದು, ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದೆ. 161 ನಸಿಂಗ್ ಆಫೀಸರ್‍ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ನರ್ಸಿಂಗ್ ಮಂಡಳಿಗಳಿಂದ ಬಿ.ಎಸ್.ಸಿ ನರ್ಸಿಂಗ್ ಪದವಿ ಹೊಂದಿದ್ದು, ಭಾರತ ಅಥವಾ ರಾಜ್ಯ ನರ್ಸಿಂಗ್ ಮಂಡಳಿಯಿಂದ ನರ್ಸ್ ಅಥವಾ ಮಿಡ್ ವೈಫ್ ನೊಂದಣಿ ಹೊಂದಿರಬೇಕು. ಜೊತೆಗೆ 50 ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಕನಿಷ್ಟ ಎರಡು ವರ್ಷ ನರ್ಸಿಂಗ್ ಹುದ್ದೆ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಇನ್ನೂ ಆಯ್ಕೆಯಾದ ಅಭ್ಯರ್ಥಿಗಳಿಗೆ 9300-34800 ರೂಪಾಯಿಯವರೆಗೂ ಮಾಸಿಕ ವೇತನ ನಿಗಧಿ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಟ 18 ಹಾಗೂ ಗರಿಷ್ಟ 35 ವರ್ಷ ತುಂಬಿರಬೇಕು. ಮೀಸಲು ಹೊಂದಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ನಿಯಮದಂತೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ರೂ.885  ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1180 ನಿಗಧಿಪಡಿಸಿದ್ದು, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅ.18 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ನವೆಂಬರ್‍ 18 ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Most Popular

To Top