2-3 ದಿನ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ, IMD ಮನ್ಸೂಚನೆ….!

Follow Us :

ಮುಂದಿನ ಎರಡು ಮೂರು ದಿನಗಳಲ್ಲಿ ಕರ್ನಾಟಕ ಸೇರಿದಂತೆ 19 ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಪಂಜಾಬ್, ಹರಿಯಾನ, ಚಂಡೀಗಡ, ದೆಹಲಿ ಹಾಗೂ ರಾಜಸ್ಥಾನದಲ್ಲಿ ದಟ್ಟವಾದ ಮಂಜು ಕಂಡುಬರಲಿದೆ. ತೀವ್ರವಾದ ಚಳಿಯಿಂದ ಜನರು ತತ್ತರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುವ್ಯ ಹಾಗೂ ಮಧ್ಯ ಭಾರತದ ತೀವ್ರ ಚಳಿ ಹಾಗೂ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ ಎನ್ನಲಾಗಿದೆ.

IMD ಮುನ್ಸೂಚನೆಯಂತೆ ಜ.8 ರಿಂದ ಜ.10 ರವರೆಗೆ ರಾಜಸ್ಥಾನ ಹಾಗೂ ಪಶ್ಚಿಮ ಮಧ್ಯಪ್ರದೇಶಧಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜ 8 ರಿಂದ ಜನವರಿ 9 ರ ಸಮಯದಲ್ಲಿ ಹಿಮಾಚಲ ಪ್ರದೇಶ, ಪಂಜಾಬ್, ಉತ್ತರಾಖಂಡ, ಹರಿಯಾಣ, ದೆಹಲಿ, ಉತ್ತರಪ್ರದೇಶ, ಚಂಡೀಗಢ ಭಾಗದಲ್ಲಿ ಲಘುವಾದ ಮಳೆಯಾಗಲಿದೆ. ಮಧ್ಯಪ್ರದೇಶ, ಮಹಾರಾಷ್ಟ್ರದ ಉತ್ತರ ಭಾಗಗಳು ಹಾಗೂ ಗುಜರಾತ್, ತಮಿಳುನಾಡು, ಕೇರಳದಲ್ಲೂ ಭಾರಿ ಮಳೆಯಾಗುವ ಸಾದ್ಯತೆಯಿದೆ. ಅದರಲ್ಲೂ ಕರಾವಳಿ ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿ ಮೂರ್ನಾಲ್ಕು ದಿನ ಗುಡುಗು ಸಮೇತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಜೊತೆಗೆ ಲಕ್ಷದ್ವೀಪ, ಕೊಂಕಣ ಮತ್ತು ಗೋವಾ, ಪೂರ್ವ ಗುಜರಾತ್, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಳಗು ಮಳೆ. ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ ಹಾಗೂ ತ್ರಿಪುರಾ ಭಾಗದಲ್ಲಿ ದಟ್ಟವಾದ ಮಂಜು ಆವರಿಸುವ ಸಾಧ್ಯತೆಯಿದೆ. ಕೇರಳ, ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.