News

ಉದ್ಯೋಗ ಹುಡುಕುತ್ತಿರುವವರಿಗೆ ಅರಣ್ಯ ಇಲಾಖೆಯಲ್ಲಿವೆ ಖಾಲಿ ಹುದ್ದೆಗಳು, 310 ಹುದ್ದೆಗಳಿಗೆ ಅರ್ಜಿ ಆಹ್ವಾನ…..!

ಕರ್ನಾಟಕದ ಅರಣ್ಯ ಇಲಾಖೆಯಿಂದ ವಿವಿಧ ವೃತ್ತಗಳಲ್ಲಿ ಖಾಲಿಯಿರುವಂತಹ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರಣ್ಯ ಇಲಾಖೆಯಲ್ಲಿ ಖಾಲಿಯಿರುವಂತಹ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, 10ನೇ ತರಗತಿ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ನೇಮಕಾತಿಗೆ ಸಂಬಂಧಿಸಿದಂತೆ ವಿವರಗಳು ಇಲ್ಲಿ ನೀಡಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳು ಖಾಲಿಯಿದ್ದು, ಬೆಂಗಳೂರಿನಲ್ಲಿ 33, ಚಿಕ್ಕಮಗಳೂರು 25, ಧಾರವಾಡ 7, ಹಾಸನ 20, ಕೆನರಾ ವೃತ್ತ 32, ಕೊಡಗು 16, ಕಲಬುರಗಿ 23,  ಚಾಮರಾಜನಗರ 32, ಮಂಗಳೂರು 20, ಮೈಸೂರು 32, ಶಿವಮೊಗ್ಗ 30, ಬೆಳಗಾವಿ 20, ಬಳ್ಳಾರಿ 20 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿರಬೇಕು. ಇನ್ನೂ ಹುದ್ದೆಗೆ ಮಾಸಿಕ 21400-42000 ವರೆಗೆ ವೇತನ ನಿಗಧಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ಅಧ್ಯರ್ಥಿಗಳು ಕನಿಷ್ಟ 18 ಗರಿಷ್ಟ 35 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, 2ಎ, 2ಬಿ, 3ಎ, 3ಬಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೇ, ಸಾಮಾನ್ಯ ಅಭ್ಯರ್ಥಿಗಳಿಗೆ 125 ರೂಪಾಯಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ 45 ರೂಪಾಯಿ ನಿಗಧಿಪಡಿಸಲಾಗಿದೆ. ಈ ಹುದ್ದೆಗಳಿಗೆ ಲಿಖಿತ ಪರೀಕ್ಷಷೆ, ಸಂದರ್ಶನ ಹಾಗೂ ವೈದ್ಯಕೀಯ ತಪಾಸಣಾ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸೆ.27 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್‍ 26 ರೊಳಗೆ ಅರ್ಜಿ ಸಲ್ಲಿಸಬೇಕಿದೆ.

Most Popular

To Top