News

ಪದವಿಧರರಿಗೆ ಅವಕಾಶ, ನಿಮ್ಹಾನ್ಸ್ ನಲ್ಲಿ 32 ಜಿಲ್ಲಾ ಕೋ ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಬೆಂಗಳೂರಿನ ಖ್ಯಾತ ನಿಮ್ಹಾನ್ಸ್ ಸಂಸ್ಥೆಯಲ್ಲಿ ಜಿಲ್ಲಾ ಕೋ ಆರ್ಡಿನೇಟರ್‍ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 32 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಒಂದು ವರ್ಷದ ಅವಧಿಗೆ ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆ ವಿಸ್ತರಣೆ ಸಹ ಮಾಡಬಹುದು ಎಂದು ಹೇಳಲಾಗಿದೆ. ಈ ಸಂಬಂಧ ನಿಮ್ಹಾನ್ಸ್ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ, ಬೆಂಗಳೂರು ಇಲ್ಲಿ ಜಿಲ್ಲಾ ಕೋ ಆರ್ಡಿನೇಟರ್‍ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಡಿ ಕರ್ನಾಟಕ ಬ್ರೈನ್ ಹೆಲ್ತ್ ಇನ್ಸಿಯೇಟಿವ್ ಯೋಜನೆಗಾಗಿ 32 ಜಿಲ್ಲಾ ಕೋ ಆರ್ಡಿನೇಟರ್‍ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು, ಸಾರ್ವಜನಿಕ ಆರೋಗ್ಯ, ಸಮಾಜಶಾಸ್ತ್ರ, ಗ್ರಾಮೀಣಾಭಿವೃದ್ದಿ, ಅರ್ಥಶಾಸ್ತ್ರ, ಮಾನವ ಸಂಪನ್ಮೂಲ, ಸೋಷಿಯಲ್ ವರ್ಕ್, ಸೈಕಾಲಜಿ ವಿಷಯಗಳಲ್ಲಿ ಮೊದಲ ದರ್ಜೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಈಗಾಗಲೇ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಕನ್ನಡ ಚೆನ್ನಾಗಿ ಓದಲು ಮತ್ತು ಬರೆಯಲು ಹಾಗೂ ಮಾತನಾಡುವ ಸಾಮರ್ಥ್ಯ ಸಹ ಹೊಂದಿರಬೇಕಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನ.17 ರಂದು ವಾಕ್ ಇನ್ ಇಂಟರ್‍ ವ್ಯೂ ನಲ್ಲಿ ಹಾಜರಾಗಬೇಕು. ಲೆಕ್ಚರ್‍ ಹಾಲ್ -1, ಅಡ್ಮಿನ್ ಬ್ಲಾಕ್, 1ನೇ ಮಹಡಿ, ನಿಮ್ಹಾನ್ಸ್, ಬೆಂಗಳೂರು ಇಲ್ಲಿ ಸಂದರ್ಶನ ನಡೆಸಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ. ಈ ಹುದ್ದೆಗೆ ಮಾಸಿಕ 35 ಸಾವಿರ ವೇತನ ನಿಗಧಿ ಪಡಿಸಲಾಗಿದೆ. ಗರಿಷ್ಟ ವಯೋಮಿತಿ 45 ವರ್ಷ. ನ.17 ರಂದು ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ಶೈಕ್ಷಣಿಕ ಪ್ರಮಾಣ ಪತ್ರಗಳು, ಅನುಭವದ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಹಾನ್ಸ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Most Popular

To Top