News

ಹೆಡ್ ಮಾಸ್ಟರ್ ನಿಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…!

ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರಃ ಎಂದು ಗುರುವಿಗೆ ದೊಡ್ಡ ಸ್ಥಾನ ನೀಡಲಾಗುತ್ತದೆ. ಆದರೆ ಕೆಲವೊಂದು ಶಿಕ್ಷಕರಿಂದ ಶಿಕ್ಷಕ ವೃತ್ತಿಗೆ ಕೆಟ್ಟ ಹೆಸರು ಬರುತ್ತದೆ. ಇತ್ತೀಚಿಗೆ ಶಿಕ್ಷಕರಿಂದಲೇ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುವಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶಿಕ್ಷಕ ವರ್ಗ ತಲೆತಗ್ಗಿಸುವಂತಾಗಿದೆ. ಅಂತಹುದೇ ಘಟನೆಯೊಂದು ಗದಗ ಜಿಲ್ಲೆಯ ನರಗುಂದ ಎಂಬಲ್ಲಿ ನಡೆದಿದೆ ಎನ್ನಲಾಗಿದೆ.

ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜ ತಲೆತಗ್ಗಿಸುವಂತಹ ಘಟನೆ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿಗೆ ಶಾಲಾ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. 5ನೇ ತರಗತಿ ವಿದ್ಯಾರ್ಥಿನಿಗೆ ಯಾವುದು ಒಳ್ಳೆಯದು ಯಾವುದು ಕೆಟ್ಟದಾಗಿ ಮುಟ್ಟುವುದು ಎಂಬುದು ತಿಳಿದಿರುವುದಿಲ್ಲ. ಅಂತಹ ಮುಗ್ದ ಬಾಲಕಿಗೆ ಶಾಲೆಯ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಚಿಕ್ಕಮಕ್ಕಳ ಮೇಲೆಯೇ ಆ ರೀತಿ ದೌರ್ಜನ್ಯವಾದರೇ ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ಈ ಘಟನೆಯಿಂದ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಹ ಹಿಂಜರಿಯುತ್ತಾರೆ ಎನ್ನಬಹುದಾಗಿದೆ.

ಶಾಲಾ ಸಮಯದಲ್ಲೇ 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಬಂದಿದ್ದು, ಬಾಲಕಿಯ ಕುಟುಂಬಸ್ಥರು ಸಹಾಯವಾಣಿ ಮೂಲಕ ದೂರು ನೀಡಿದ್ದಾರೆ. ಇನ್ನೂ ದೂರಿನಂತೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ನರಗುಂದ ಪೊಲೀಸರು ಸಹ ಪ್ರಕರಣ ದಾಖಲಿಸಿಕೊಂಡು ಮುಖ್ಯಶಿಕ್ಷಕನನ್ನು ಬಂಧಿಸಿದ್ದಾರೆ. ಪೊಲೀಸರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Trending

To Top