News

ಬ್ಯಾಂಕ್ ಹುದ್ದೆ ಬಯಸುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, SBI ನಲ್ಲಿ 8773 ಕ್ಲರ್ಕ್ ಹುದ್ದೆಗಳ ನೇಮಕಾತಿ….!

ಭಾರತದಲ್ಲಿ ಅತೀ ಹೆಚ್ಚು ಗ್ರಾಹಕರನ್ನು ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಪ್ರತೀ ವರ್ಷ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿರುತ್ತದೆ. ಈ ಬಾರಿಯೂ ಸಹ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಧಿಸೂಚನೆ ಹೊರಡಿಸಿದೆ. ಖಾಲಿಯಿರುವಂತಹ 8773 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಡಿ.7 ರೊಳಗೆ ಅರ್ಜಿ ಸಲ್ಲಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ನೇಮಕಾತಿಗಾಗಿ ಬಹುನಿರೀಕ್ಷಿತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ ನವೆಂಬರ್ 17 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್ 7 ಕೊನೆಯ ದಿನಾಂಕವಾಗಿದೆ. ಇನ್ನೂ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶೈಕ್ಷಣಿಕ ಸಂಸ್ಥೆಗಳು/ಮಂಡಳಿಯಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಡಿ.31 ರಂದು ಅಥವಾ ಅದಕ್ಕೂ ಮುಂಚೆ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ ಪ್ರಮಾಣ ಪತ್ರ ಪಡೆದವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ. ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳೂ ಸಹ ಅರ್ಜಿ ಸಲ್ಲಿಸಬಹದಾಗಿದೆ.

ಇನ್ನೂ ಸಾಮಾನ್ಯ, ಹಿಂದುಳಿತ ವರ್ಗ, ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಸೇರಿದ ಅಭ್ಯರ್ಥಿಗಳು 750 ರೂಪಾಯಿ ಶುಲ್ಕ ಪಾವತಿಸಬೇಕಿದೆ. ಎಸ್.ಸಿ/ಎಸ್.ಟಿ, ಅಂಗವೈಕಲ್ಯ ಅಭ್ಯರ್ಥಿಗಳು, ಮಾಜಿ ಸೈನಿಕರು ಅಥವಾ ಅವರ ಅವಲಂಬಿತರಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ನ.17 ರಿಂದ ಅವಕಾಶ ನೀಡಿದ್ದು, ಡಿ.7 ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಪೂರ್ವಭಾವಿ ಪರೀಕ್ಷೆಯನ್ನು ಜ.24 ರಂದು ಹಾಗೂ ಮುಖ್ಯ ಪರೀಕ್ಷೆಯನ್ನು ಫೆ.24 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಅಧಿಕೃತ ವೆಬ್ ಸೈಟ್ ಭೇಟಿ ನೀಡಬಹುದಾಗಿದೆ.

Most Popular

To Top