News

38 ವರ್ಷದ ವ್ಯಕ್ತಿಯಿಂದ 68 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ, ಡ್ರಾಪ್ ನೀಡೋ ನೆಪದಲ್ಲಿ ವೃದ್ದೆಯ ಮೇಲೆ ಅತ್ಯಾಚಾರ…..!

ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೊರ್ವ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ಸಹ ಮಾಡಿರುವಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರವೆಸಗಿದ 38 ವರ್ಷದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಈ ಹಿಂದೆ ಸಹ ಲೈಂಗಿಕ ಕಿರುಕುಳವೆಸಗಿದ್ದ. ಇದೀಗ ಮತ್ತೆ ಕಾಮುಕ ಅದೇ ಕೆಲಸ ಮಾಡಿದ್ದಾನೆ. ಸದ್ಯ ಆರೋಪಿ ಪೊಲೀಸರ ಅತಿಥಿಯಾಗಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ವೃದ್ದೆ ಮುಂಬೈನ ಪೂರ್ವ ಉಪನಗರದಲ್ಲಿ ನಡೆದ ಧಾರ್ಮಿಕ ಸಮಾರಂಭದ ಬಳಿಕ ಸರಕುಗಳನ್ನು ಮಾರಾಟ ಮಾಡುತ್ತಿದ್ದಳು. ಇದೇ ಸಮಾರಂಭಕ್ಕೆ ಆರೋಪಿ ಸಹ ಹೋಗಿದ್ದನಂತೆ. ಈ ವೇಳೆ ಮಹಿಳೆಯ ಜೊತೆಗೆ ಚೆನ್ನಾಗಿ ಮಾತನಾಡುತ್ತಾ ಆಕೆಗೆ ತನ್ನ ಮೇಲೆ ನಂಬಿಕೆ ಬರುವಂತೆ ಮಾಡಿದ್ದಾನೆ. ಬಳಿಕ ವೃದ್ದೆಯನ್ನು ತನ್ನ ಮನೆಗೆ ಡ್ರಾಪ್ ಮಾಡುವುದಾಗಿ ಮನವೊಲಿಸಿದ್ದಾನೆ. ಆತನನ್ನು ನಂಬಿದ ಸಂತ್ರಸ್ತೆ ಆತನೊಂದಿಗೆ ಹೋಗಲು ಒಪ್ಪಿಕೊಂಡಿದ್ದಾಳೆ. ಜೊತೆಗೆ ಮನೆಗೆ ಹೋಗುವಾಗ ರಾತ್ರಿಯ ಊಟಕ್ಕಾಗಿ ಆಹಾರವನ್ನು ಸಹ ತೆಗೆದುಕೊಂಡು ಹೋಗಿದ್ದಾರೆ. ಬಳಿಕ ವೃದ್ದೆಯ ಮನೆಯಲ್ಲಿ ಇಬ್ಬರೂ ಊಟ ಮಾಡಿದ್ದಾರೆ. ಊಟ ಮಾಡಿದ ನಂತರ ವೃದ್ದೆಯನ್ನು ಲೈಂಗಿಕ ಕ್ರಿಯೆಗಾಗಿ ಒತ್ತಾಯ ಮಾಡಿದ್ದಾನಂತೆ. ಅದಕ್ಕೆ ವೃದ್ದೆ ನಿರಾಕರಿಸಿದ್ದಾಳೆ.

ಆದರೂ ಕಾಮುಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದಾನೆ. ಈ ವೇಳೆ ಆಕೆ ಪ್ರತಿರೋಧ ಮಾಡಿದ್ದು, ಆಕೆಯ ಮೇಲೆ ಹಲ್ಲೆ ಸಹ ಮಾಡಿದ್ದಾನೆ. ಬಳಿಕ ಸ್ಥಳದಿಂದ ಆತ ಪರಾರಿಯಾಗಿದ್ದಾನೆ. ಇದರಿಂದಾಗಿ ಸಂತ್ರಸ್ತೆ ಆಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾಳೆ. ಆಕೆಯನ್ನು ಸ್ಥಳೀಯರು ಗಮನಿಸಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ, ಆಕೆಯ ಕುಟುಂಬಸ್ಥರಿಗೂ ಸುದ್ದಿ ತಿಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಆಕೆಯನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಆತ ಮಾಡಿದ ತಪ್ಪನ್ನು ಸಹ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕಳೆದ 2017 ರಲ್ಲೂ ಇದೇ ಆರೋಪಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ.

Most Popular

To Top