Film News

ಮೊದಲು ಕನ್ನಡದಲ್ಲಿ IAS ಪಾಸ್ ಮಾಡಿ ಅಧಿಕಾರಿಯಾಗಿದ್ದ ನಟ ಕೆ.ಶಿವರಾಮ್ ಹೃದಯಾಘಾತದಿಂದ ನಿಧನ……..!

ನಿವೃತ್ತ IAS ಅಧಿಕಾರಿ ಕೆ.ಶಿವರಾಮ್ HCG ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಟಿ ಶಿವರಾಮ್ ರವರು ಕಳೆದ ಎರಡು ದಿನದ ಹಿಂದೆ ತೀವ್ರ ಹೃದಾಯಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯೆಜಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಕೆ.ಶಿವರಾಮ್ ರವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಾಜಕಾರಣಿಗಳು, ಅಭಿಮಾನಿಗಳು ಹಾಗೂ ಸಂಬಂಧಿಕರು ಪ್ರಾರ್ಥಿಸಿ ಶ್ರದ್ದಾಂಜಲಿಯನ್ನು ಅರ್ಪಿಸುತ್ತಿದ್ದಾರೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದ ಕೆ.ಶಿವರಾಮ್ ರವರು MSIL ಎಂಡಿಯಾಗಿ ಕೆಲಸ ಮಾಡಿ ಕಳೆದ 2013 ರಲ್ಲಿ ನಿವೃತ್ತಿಯಾದರು. ನಿವೃತ್ತಿಯಾದ ಬಳಿಕ ಕಳೆದ 2014ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರ ಸ್ಪರ್ಧಿಸಿದ್ದರು.  ಆದರೆ ರಮೇಶ್ ಜಿಗಜಿಣಗಿ ವಿರುದ್ದ ಸೋತರು. ಬಳಿಕ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿ ಅದೇ ವರ್ಷ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಕಳೆದ 12 ದಿನಗಳಿಂದ ಕೆ.ಶಿವರಾಮ್ ರವರು ಅನಾರೋಗ್ಯದಿಂದ ಬಳಲುತ್ತಿದ್ದು, ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ಅವರು ಫೆ.29 ರಂದು ಮೃತಪಟ್ಟಿದ್ದಾರೆ. ಅವರಿಗೆ ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಎಂದು ಹೇಳಲಾಗಿದೆ. ಅಧಿಕ ರಕ್ತದೊತ್ತಡದಿಂದ ಕಳೆದ 20 ದಿನಗಳಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು ಎಂದು ಶಿವರಾಂ ಅಳಿಯ ಮಾಹಿತಿ ನೀಡಿದ್ದಾರೆ.

ನಟ ಶಿವರಾಮ್ ರವರು ರಾಮನಗರ ಜಿಲ್ಲೆಯ ಬಿಡದಿಯ ಉರಗಳ್ಳಿಯಲ್ಲಿ 1953ರಲ್ಲಿ ಜನಿಸಿದ್ದರು. 1993ರಲ್ಲಿ ಬಾ ನಲ್ಲೆ ಮಧುಚಂದ್ರಕ್ಕೆ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಬಳಿಕ ವಸಂತಕಾವ್ಯ, ಸಾಂಗ್ಲಿಯಾನ-3, ಪ್ರತಿಭಟನೆ, ಗೇಮ್ ಫಾರ್‍ ಲವ್, ನಾಗ, ಓ ಪ್ರೇಮದೇವತೆ, ಟೈಗರ್‍ ಮೊದಲಾದ ಸಿನೆಮಾಗಳಲ್ಲಿ ನಟಿಸಿ ಅಪಾರ ಸಂಖ್ಯೆ ಅಭಿಮಾನಿಗಳನ್ನು ಸಹ ಪಡೆದುಕೊಂಡಿದ್ದರು. ಸಿನೆಮಾಗಳಲ್ಲಿ ನಟಿಸುವುದರ ಜೊತೆಗೆ ಕೆಲವೊಂದು ಸಿನೆಮಾಗಳನ್ನು ಸಹ ನಿರ್ಮಾಣ ಮಾಡಿದ್ದಾರೆ. ಇದೀಗ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

Most Popular

To Top