Film News

ಸಮಾಜದ ಬಗ್ಗೆ ಕಾಳಜಿ ಇರುವವರು ಲಸಿಕೆ ಹಾಕಿಸಿಕೊಳ್ಳಿ

ಚೆನೈ: ಇಡೀ ವಿಶ್ವವನ್ನೇ ಕಗ್ಗತ್ತಲಿಗೆ ತಳ್ಳಿದಂತಹ ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಲಸಿಕೆಯನ್ನು ರಾಷ್ಟ್ರವ್ಯಾಪಿ ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ ಲಸಿಕೆಯನ್ನು ಹಾಕಿಸಿಕೊಂಡ ಕಾಲಿವುಡ್ ನಟ ಕಮಲ್ ಹಾಸನ್ ಸಮಾಜದ ಬಗ್ಗೆ ಕಾಳಜಿ ಇರುವವರು ಲಸಿಕೆ ಹಾಕಿಸಿಕೊಳ್ಳಿ ಎಂದು ಸಂದೇಶವನ್ನು ಸಹ ಸಾರಿದ್ದಾರೆ.

ತಮಿಳುನಾಡಿನ ಖ್ಯಾತ ನಟ ಕಮಲ್ ಹಾಸನ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಾರತದ ಮೊದಲ ಸ್ಟಾರ್ ಕಲಾವಿದ ಎನ್ನಿಸಿಕೊಂಡಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಜೊತೆಗೆ ಪೊಟೋವನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು, ಸಂದೇಶವನ್ನು ಸಹ ಸಾರಿದ್ದಾರೆ. ತಾವು ಲಸಿಕೆಯನ್ನು ಹಾಕಿಸಿಕೊಂಡಿದ್ದು, ಸಮಾಜದ ಬಗ್ಗೆ ಕಾಳಜಿ ಇರುವಂತಹ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಬೇಕೆಂದು ಶೇರ್ ಮಾಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಮಲ್ ಹಾಸನ್, ಶ್ರೀ ರಾಮಚಂದ್ರ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯನ್ನು ಪಡೆದಿದ್ದು, ನಿಮ್ಮೊಬ್ಬರ ಕಾಳಜಿ ಮಾತ್ರವಲ್ಲದೇ, ಸಮಾಜದ ಬಗ್ಗೆ ಕಾಳಜಿ ಇರುವಂತಹವರು ಸಹ ಲಸಿಕೆ ಪಡೆಯಿರಿ, ರೋಗ ವಿರುದ್ದ ಹೋರಾಡುವಂತಹ ಲಸಿಕೆ ಹಾಕಿಸಿಕೊಳ್ಳಿ ಎಂದಿದ್ದು, ಮುಂದಿನ ತಿಂಗಳು ಭ್ರಷ್ಟಾಚಾರದ ವಿರುದ್ದ ಹೋರಾಡುವ ಲಸಿಕೆ ಸಿದ್ದರಾಗಿ ಎಂದು ತಮಿಳುನಾಡಿನ ಚುನಾವಣೆಯ ಕುರಿತು ಸಹ ಹೇಳಿದ್ದಾರೆ.

Trending

To Top