ತಮಿಳು ನಟ ವಿಜಯ್ ಆಂಟೋನಿ ಪುತ್ರಿ ಆತ್ಮಹತ್ಯೆ, ನೇಣು ಬಿಗಿದುಕೊಂಡು ಆತ್ಮಹತ್ಯೆ…!

ಬಿಚ್ಚಗಾಡು ಸಿನೆಮಾದ ಮೂಲಕ ಭಾರಿ ಫೇಂ ಪಡೆದುಕೊಂಡ ತಮಿಳು ನಟ ವಿಜಯ್ ಆಂಟೋನಿ ಪುತ್ರಿ ಮೀರಾ (16) ಆತ್ಮಹತ್ಯೆಗೆ ಶರಣಾಗಿದ್ದಾರೆ. ಚೆನೈನಲ್ಲಿರುವ ಡಿಡಿಕೆ ರೋಡ್ ನಲ್ಲಿರುವ ಮನೆಯಲ್ಲಿ ಸೆ.19 ಮಂಗಳವಾರ ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ಮೀರಾ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ವಿಜಯ್ ಆಂಟೋನಿ ಪುತ್ರಿ ಮೀರಾ ನೇಣು ಹಾಕಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಕೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲು ಪ್ರಯತ್ನಗಳನ್ನು ಮಾಡಿದರು. ಅಲ್ಲಿಗಾಗಲೇ ಆಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೀರಾ ಚೆನೈನಲ್ಲಿ ಚರ್ಚಿ ಗೇಟ್ ನಲ್ಲಿರುವ ಚರ್ಚ್ ಪಾರ್ಕ್ ಸ್ಕೂಲ್ ನಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮೀರಾ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಅದಕ್ಕಾಗಿ ಚಿಕಿತ್ಸೆ ಕೂಡ ಮಾಡಿಸುತ್ತಿದ್ದರಂತೆ. ಒತ್ತಡದ ಕಾರಣದಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗುತ್ತಿದೆ.

ಇನ್ನೂ ಈ ಬಗ್ಗೆ ಪೊಲೀಸರು ವಿಚಾರಣೆ ಕೈಗೊಂಡಿದ್ದು, ಶೀಘ್ರದಲ್ಲೇ ವಿವರಗಳು ಹೊರಬರಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಸಿನಿರಂಗದ ಅನೇಕರು ವಿಜಯ್ ಆಂಟೋನಿಗೆ ಪೋನ್ ಮಾಡಿ ಸಂತಾಪ ಸೂಚಿಸುತ್ತಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಿಂದ ಮೀರಾ ಮಾನಸಿಕ ಖಿನ್ನತೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.