ಅದಿತಿ ಪ್ರಭುದೇವ ಬೇಬಿ ಬಂಪ್ ಪೊಟೋಸ್ ವೈರಲ್, ತನ್ನ ಆಸೆಯನ್ನು ಈಡೇರಿಸಿಕೊಂಡ ಕನ್ನಡ ನಟಿ ಅದಿತಿ ಪ್ರಭುದೇವ….!

Follow Us :

ಚಂದನವನದ ಕ್ಯೂಟ್ ನಟಿ ಅದಿತಿ ಪ್ರಭುದೇವ 2024 ರ ಮೊದಲ ದಿನವೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದರು. ತಾನು ಅಮ್ಮನಾಗುತ್ತಿರುವ ಸಂತಸದ ವಿಚಾರವನ್ನು ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಂಡಿದ್ದರು. ಗರ್ಭಿಣಿಯಾದ ಬಳಿಕ ಆಕೆಗೆ ಪ್ರೆಗ್ನೆನ್ಸಿ ಪೊಟೋಶೂಟ್ ಮಾಡಿಸಿಕೊಳ್ಳಬೇಕೆಂಬ ಬಯಕೆಯಿದ್ದು, ಅದರಂತೆ ಇದೀಗ ಅದ್ಬುತವಾಗಿ ಪೊಟೋಶೂಟ್ಸ್ ಮಾಡಿಸಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಸಾಲು ಸಾಲು ಸಿನೆಮಾಗಳ ಮೂಲಕ ಸ್ಟಾರ್‍ ನಟಿಯಾಗಿ ಅನೇಕ ಹಿಟ್ ಸಿನೆಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯ ಮೂಲಕ ಸಿನೆಮಾ ಲೋಕಕ್ಕೆ ಕಾಲಿಟ್ಟ ಈಕೆ ಕಡಿಮೆ ಸಮಯದಲ್ಲೇ ಬಹುಬೇಡಿಕೆ ನಟಿಯಾದರು. ಕಳೆದ 2022 ರಲ್ಲಿ ಈಕೆ ರೈತ ಯಶಸ್ ಎಂಬಾತನೊಂದಿಗೆ ಮದುವೆಯಾದರು. ಇದೀಗ 2 ವರ್ಷಗಳ ಬಳಿಕ ಆಕೆ ಗರ್ಭಿಣಿಯಾಗಿದ್ದು, ಈ ಸುದ್ದಿಯನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಜೊತೆಗೆ ಕೆಲವೊಂದು ಬೇಬಿ ಬಂಪ್ ಪೊಟೋಸ್ ಸಹ ಹಂಚಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆಕೆ ಪ್ರೆಗ್ನೆನ್ಸಿ ಪೊಟೋಶೂಟ್ಸ್ ಹಂಚಿಕೊಂಡಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಸದ್ಯ ನಟಿ ಅದಿತಿ ತುಂಬು ಗಂರ್ಭಿಣಿಯಾಗಿದ್ದಾರೆ. ತುಂಬು ಗರ್ಭಿಣಿಯಾಗಿದ್ದು ಆಕೆ ಬೇಬಿ ಬಂಪ್ ಪೊಟೋಶೂಟ್ ಮಾಡಿಸಿದ್ದಾರೆ. ಇತ್ತೀಚಿಗಷ್ಟೆ ಸೀಮಂತ ಕಾರ್ಯಕ್ರಮ ಸಹ ಅದ್ದೂರಿಯಾಗಿ ನೆರವೇರಿತ್ತು. ಇದೀಗ ಪ್ರೆಗ್ನೆನ್ಸಿ ಪೊಟೋಶೂಟ್ಸ್ ಮಾಡಿಸಿದ್ದಾರೆ. ಈ ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೊನೆಗೂ ನನ್ನ ಪುಟ್ಟ ಆಸೆ ನೆರವೇರಿದೆ ಎಂದು ಬರೆದುಕೊಂಡಿದ್ದಾರೆ. ರೆಡ್ ಕಲರ್‍ ಸೀರೆಯಲ್ಲಿ ಅದಿತಿ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಮುಖದಲ್ಲಿ ತಾಯ್ತನದ ಕಳೆ ಎದ್ದು ಕಾಣುತ್ತಿದೆ. ಆಕೆಯ ಪತಿ ಯಶಸ್ ಸಹ ಬಿಳಿ ಬಣ್ಣದ ಶೇರ್ವಾನಿಯಲ್ಲಿ ಕಾಣಿಸಿಕೊಂಡಿದ್ದು, ಇಬ್ಬರೂ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.