ತಮ್ಮ ಕ್ಯೂಟ್ ಫ್ಯಾಮಿಲಿ ಪೊಟೋ ಹಂಚಿಕೊಂಡ ನಟಿ ಅಮೂಲ್ಯ, ಸೋ ಕ್ಯೂಟ್ ಫ್ಯಾಮಿಲಿ ಎಂದ ಫ್ಯಾನ್ಸ್…….!

Follow Us :

ಸ್ಯಾಂಡಲ್ ವುಡ್ ಸ್ಟಾರ್‍ ನಟಿ ಅಮೂಲ್ಯ ಮದುವೆಯಾದ ಬಳಿಕ ಸಿನೆಮಾಗಳಿಂದ ದೂರವೇ ಉಳಿದಿದ್ದಾರೆ. ಆದರೆ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡಬಾರದೆಂಬ ದೃಷ್ಟಿಯಿಂದ ಆಕೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾ, ಪೊಟೋಗಳು, ವಿಡಿಯೋಗಳ ಮೂಲಕ ರಂಜಿಸುತ್ತಿರುತ್ತಾರೆ. ಇದೀಗ ತಮ್ಮ ಮುದ್ದಿನ ಕುಟುಂಬದ ಪೊಟೋ ಹಂಚಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ನಟಿ ಅಮೂಲ್ಯ ಚಿಕ್ಕವಯಸ್ಸಿನಲ್ಲೇ ಬಣ್ಣದಲೋಕಕ್ಕೆ ಕಾಲಿಟ್ಟರು. ಆಕೆಗೆ ಬಿಗ್ ಬ್ರೇಕ್ ನೀಡಿದ ಸಿನೆಮಾ ಅಂದರೇ ಅದು ಚೆಲುವಿನ ಚಿತ್ತಾರ. ಮದುವೆಯ ಬಳಿಕ ಆಕೆ ಸಿನಿರಂಗದಿಂದ ದೂರವೇ ಉಳಿದಿದ್ದಾರೆ. ಆದರೆ ಸೋಷಿಯಲ್ ಮಿಡಿಯಾ ಮೂಲಕವೇ ಅಭಿಮಾನಿಗಳೊಂದಿಗೆ ಆಕೆ ಸದಾ ಟಚ್ ನಲ್ಲಿರುತ್ತಾರೆ. ಸೋಷಿಯಲ್ ಮಿಡಿಯಾದ ಮೂಲಕವೇ ಆಕೆಯ ವೈಯುಕ್ತಿಕ ಜೀವನ, ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಏಳು ವರ್ಷಗಳ ಹಿಂದೆ ಮುಗುಳು ನಗೆ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡ ಅಮೂಲ್ಯ ಶೀಘ್ರದಲ್ಲೇ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಲಿದ್ದಾರಂತೆ. ಮದುವೆಯಾದ ಬಳಿಕ ಅಮೂಲ್ಯ ಮಕ್ಕಳು, ಕುಟುಂಬ ನಿರ್ವಹಣೆ ಮಾಡುತ್ತಾ ಬ್ಯುಸಿಯಾಗಿದ್ದಾರೆ. ಹಬ್ಬ ಹರಿದಿನಗಳು ಸೇರಿದಂತೆ ವಿಶೇಷ ದಿನಗಳಂದು ಸ್ಪೇಷಲ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.

ಇದೀಗ ನಟಿ ಅಮೂಲ್ಯ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ. ತಮ್ಮ ಇಬ್ಬರು ಮಕ್ಕಳು ಹಾಗೂ ಪತಿಯೊಂದಿಗೆ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮಕ್ಕಳು ಹಾಗೂ ಅಮೂಲ್ಯ ಪತಿ ಬಿಳಿ ಬಣ್ಣದ ಡ್ರೆಸ್ ನಲ್ಲಿ ಹಾಗೂ ಅಮೂಲ್ಯ ರೆಡ್ ಕಲರ್‍ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆಕೆಯ ಪೊಟೋಗಳನ್ನು ನೋಡಿದ ಅಭಿಮಾನಿಗಳು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ. ರಾಜಕುಮಾರರ ಜೊತೆಗೆ ರಾಜ-ರಾಣಿ ಎಂದು ಅನೇಕರು ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಅಮೂಲ್ಯ ಮತ್ತೆ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಸುದ್ದಿಯನ್ನು ಕೇಳಿದ ಅಮೂಲ್ಯ ಫ್ಯಾನ್ಸ್ ಪುಲ್ ಖುಷಿಯಾಗಿದ್ದಾರೆ. ಪ್ರಜ್ವಲ್ ದೇವರಾಜ್ ರವರಿಗೆ ಜೋಡಿಯಾಗಿ ಕರಾವಳಿ ಎಂಬ ಸಿನೆಮಾದ ಮೂಲಕ ಮತ್ತೆ ರೀ ಎಂಟ್ರಿ ಕೊಡಲಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ.