ಡಿಸೈನರ್ ಲೆಹಂಗಾದಲ್ಲಿ ದೇವತೆಯಂತೆ ಕಾಣಿಸಿಕೊಂಡ ಆಶಿಕಾ ರಂಗನಾಥ್, ವೈರಲ್ ಆದ ಪೊಟೋಸ್…..!

Follow Us :

ಸ್ಯಾಂಡಲ್ ವುಡ್ ಸಿನಿರಂಗದ ಬಹುಬೇಡಿಕೆ ನಟಿಯರಲ್ಲಿ ಒಬ್ಬರಾದ ಆಶಿಕಾ ರಂಗನಾಥ್ ಟಾಲಿವುಡ್ ನಲ್ಲೂ ಸಹ ಮಿಂಚುತ್ತಿದ್ದಾರೆ. ಅಮಿಗೋಸ್ ಎಂಬ ಸಿನೆಮಾದ ಮೂಲಕ ಟಾಲಿವುಡ್ ಅಂಗಳಕ್ಕೆ ಕಾಲಿಟ್ಟ ಆಶಿಕಾ, ಅಕ್ಕಿನೇನಿ ನಾಗಾರ್ಜುನ್ ರವರ ಜೊತೆಗೆ ನಾ ಸಾಮಿ ರಂಗ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನೆಮಾ ಒಳ್ಳೆಯ ಬ್ಲಾಕ್ ಬ್ಲಸ್ಟರ್‍ ಹಿಟ್ ಪಡೆದುಕೊಂಡಿದ್ದು, ಆಶಿಕಾ ಕ್ರೇಜ್ ಸಹ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ.

ಕನ್ನಡದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್ ಕಳೆದ 2016 ರಲ್ಲಿ ತೆರೆಕಂಡ ಜಾಲಿ ಭಾಯ್ಸ್ ಎಂಬ ಕನ್ನಡ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದ ಮೂಲಕ ಯುವಕರ ಕ್ರಷ್ ಆದರು. ಬಳಿಕ ಆಕೆ ಅನೇಕ ಸಿನೆಮಾಗಳಲ್ಲಿ ನಟಿಸಿ ಬಹುಬೇಡಿಕೆ ಸೃಷ್ಟಿಸಿಕೊಂಡರು. ತಮಿಳಿನ ಅರಸನ್ ಎಂಬ ಸಿನೆಮಾದ ಮೂಲಕ ಕಾಲಿವುಡ್ ಗೆ ಎಂಟ್ರಿ ಕೊಟ್ಟರು. ಈ ಸಿನೆಮಾ ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಕೊಡಲಿಲ್ಲ ಎಂದೇ ಹೇಳಬಹುದು. ಸದ್ಯ ಟಾಲಿವುಡ್ ನಲ್ಲಿ ಆಶಿಕಾ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ಅದರಲ್ಲೂ ನಾ ಸಾಮಿ ರಂಗ ಸಿನೆಮಾದ ಮೂಲಕ ಮತಷ್ಟು ಕ್ರೇಜ್ ಪಡೆದುಕೊಂಡಿದ್ದು, ಆಕೆಗೆ ಅವಕಾಶಗಳೂ ಸಹ ಹರಿದುಬರುತ್ತಿವೆ ಎನ್ನಲಾಗುತ್ತಿದೆ.

ನಟಿ ಆಶಿಕಾ ರಂಗನಾಥ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾ ಮೂಲಕ ವಿವಿಧ ರೀತಿಯ ಪೊಟೋಶೂಟ್ಸ್, ವಿಡಿಯೋಗಳ ಜೊತೆಗೆ ತಮ್ಮ ಬಗ್ಗೆ ಅಪ್ಡೇಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಡಿಸೈನರ್‍ ಲೆಹಂಗಾದಲ್ಲಿ ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದಾರೆ. ಡಿಸೈನರ್‍ ಲೆಹಂಗಾದಲ್ಲಿ ಆಕೆ ಸುರಲೋಕದ ಸುಂದರಿಯಂತೆ ಕಾಣಿಸಿಕೊಂಡಿದ್ದಾರೆ. ಈ ಪೊಟೋಗಳನ್ನು ಕಂಡ ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರು ಫಿದಾ ಆಗಿದ್ದಾರೆ. ವಿವಿಧ ರೀತಿಯ ಕಾಮೆಂಟ್ ಗಳು, ಲೈಕ್ ಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ. ಕೊನೆಯದಾಗಿ ಆಕೆ ಅಕ್ಕಿನೇನಿ ನಾಗಾರ್ಜುನ್ ಜೊತೆಗೆ ನಾ ಸಾಮಿ ರಂಗ ಎಂಬ ಸಿನೆಮಾದ ಮೂಲಕ ಒಳ್ಳೆಯ ಸಕ್ಸಸ್ ಕಂಡುಕೊಂಡಿದ್ದಾರೆ. ಸದ್ಯ ಆಕೆಗೆ ಅವಕಾಶಗಳು ಹರಿದುಬರುತ್ತಿವೆ ಎಂದು ಹೇಳಲಾಗುತ್ತಿದೆ.