Film News

ಮತ್ತೆ ಪ್ರೀತಿಗೆ ಬಿದ್ರಾ ಮೆಗಾ ಡಾಟರ್ ನಿಹಾರಿಕಾ, ಆಕೆ ಹಂಚಿಕೊಂಡ ಪೋಸ್ಟ್ ನ ಅರ್ಥವಾದರೂ ಏನು?

ಟಾಲಿವುಡ್ ಮೆಗಾ ಕುಟುಂಬದ ಏಕೈಕ ನಟಿ ನಿಹಾರಿಕಾ ಕೊಣಿದೆಲಾ ಕೆಲವು ತಿಂಗಳುಗಳಿಂದ ಸದಾ ಸುದ್ದಿಯಲ್ಲೇ ಇರುತ್ತಾರೆ. ಅದರಲ್ಲೂ ಕೆಲವು ದಿನಗಳ ಹಿಂದೆಯಷ್ಟೆ ಆಕೆ ಚೈತನ್ಯ ಜೊನ್ನಲಗಡ್ಡ ಜೊತೆಗೆ ವಿಚ್ಚೇದನ ಪಡೆದುಕೊಂಡು ಸುದ್ದಿಯಾಗಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ನಿಹಾರಿಕಾ ತನ್ನ ಇನ್ಸ್ಟಾ ಖಾತೆಯಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿದ್ದು, ಈ ಸ್ಟೋರಿ ನೋಡಿದ ಅನೇಕರು ನಿಹಾರಿಕಾ ಮತ್ತೆ ಪ್ರೀತಿಗೆ ಬಿದ್ರಾ ಎಂಬ ಅನುಮಾನಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ನಟಿ ನಿಹಾರಿಕಾ ಸಿನಿರಂಗದಲ್ಲಿ ಸಕ್ಸಸ್ ಕಾಣಲು ತುಂಬಾನೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮದುವೆಯಾಗುವುದಕ್ಕೂ ಮುಂಚೆ ಆಕೆ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದರೂ ಸಹ ಆಕೆ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಮದುವೆಯಾದ ಬಳಿಕ ಸಿನೆಮಾಗಳಿಂದ ದೂರವೇ ಉಳಿದರು. ಬಳಿಕ ಆಕೆ ಕೆಲವೊಂದು ಕಾರಣಗಳಿಂದ ಚೈತನ್ಯ ಜೊನ್ನಲಗಡ್ಡ ಜೊತೆಗೆ ವಿಚ್ಚೇದನ ಪಡೆದುಕೊಂಡಿದ್ದಾರೆ. ಇದೀಗ ಸಿನೆಮಾಗಳಲ್ಲಿ ನಟಿಸಲು ಆಫರ್‍ ಗಳಿಗಾಗಿ ಸಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳ ಮೂಲಕ ಸದದ್ದು ಮಾಡುತ್ತಿರುತ್ತಾರೆ. ಇದೀಗ ನಿಹಾರಿಕಾ ತನ್ನ ಇನ್ಸ್ಟಾ ಸ್ಟೋರಿಯಲ್ಲಿ ಪೊಟೋ ಒಂದನ್ನು ಹಂಚಿಕೊಂಡಿದ್ದು, ಆಕೆಯ ಪೋಸ್ಟ್ ವೈರಲ್ ಆಗಿದೆ.

ವಿಚ್ಚೇದನದ ಬಳಿಕ ನಿಹಾರಿಕಾ ಕೆರಿಯರ್‍ ನಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಹಿರೋಯಿನ್ ಆಗಿ ಎಂಟ್ರಿ ಕೊಟ್ಟಿದ್ದು, ಆಂಕರ್‍ ಆಗಿ ಶೋ ಒಂದನ್ನು ಹೋಸ್ಟ್ ಮಾಡುತ್ತಿದ್ದಾರೆ. ಜೊತೆಗೆ ಆಕೆ ಕೆಲವೊಂದು ಸಿನೆಮಾಗಳು ಹಾಗೂ ವೆಬ್ ಸಿರೀಸ್ ಗಳನ್ನು ಸಹ ನಿರ್ಮಾಣ ಮಾಡುತ್ತಿದ್ದಾರೆ. ಖಾಲಿ ಸಮಯ ಸಿಕ್ಕಾಗಲೆಲ್ಲಾ ಆಕೆ ಸ್ನೇಹಿತರೊಂದಿಗೆ ವೆಕೇಷನ್ ಗಳಿಗೆ ಹಾರುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆಯ ವಿರುದ್ದ ಎದುರಾಗುತ್ತಿದ್ದ ಟ್ರೋಲ್ ಗಳ ಬಗ್ಗೆ ತಲೆಗೆಡಿಸಿಕೊಳ್ಳದೇ ಆಕೆ ತನ್ನಿಷ್ಟದಂತೆ ಜೀವನ ಸಾಗಿಸುತ್ತಿದ್ದಾರೆ. ನಿಹಾರಿಕಾ ವೈಯುಕ್ತಿಕ ವಿಚಾರದ ಬಗ್ಗೆ ಆಗಾಗ ಕೆಲವೊಂದು ಸುದ್ದಿಗಳು ಕೇಳಿಬರುತ್ತಲೇ ಇರುತ್ತದೆ. ಈಗಾಲೇ ನಿಹಾರಿಕಾ ಪ್ರೀತಿಗೆ ಬಿದ್ದಿದ್ದಾರೆ ಎಂಬ ರೂಮರ್‍ ಗಳು ಕೇಳಿಬಂದಿದೆ. ಇದೀಗ ಆಕೆ ತನ್ನ ಇನ್ಸ್ಟಾ ಖಾತೆಯ ಸ್ಟೋರಿಯಲ್ಲಿ ಆನೆಗಳ ಜೋಡಿ ಮುಖಗಳನ್ನು ಹತ್ತಿರದಲ್ಲಿ ಇಟ್ಟುಕೊಂಡು ಪ್ರೀತಿಯಿಂದ ನೋಡಿಕೊಳ್ಳುತ್ತಿರುತ್ತದೆ. ಆ ಪೊಟೋ ಹಂಚಿಕೊಂಡ ನಿಹಾರಿಕಾ ಅದಕ್ಕೆ ರೆಡ್ ಹಾರ್ಟ್ ಸಿಂಬಲ್ ಸಹ ಇಟ್ಟಿದ್ದಾರೆ.

ಇನ್ನೂ ಈ ಸ್ಟೋರಿ ನೋಡಿದ ಎಲ್ಲರೂ ನಿಹಾರಿಕಾ ಮತ್ತೆ ಪ್ರೀತಿಗೆ ಬಿದ್ದಿದ್ದಾರೆ ಎಂಬ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಆದರೆ ಕೆಲವರು ನಿಹಾರಿಕಾಗೆ ಆನೆಗಳು ಅಂದ್ರೆ ಇಷ್ಟ ಆ ಕಾರಣದಿಂದಲೇ ಈ ಫೊಸ್ಟ್ ಹಂಚಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಿಹಾರಿಕಾ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ.

Most Popular

To Top