ಜೈಲರ್ ಸಿನೆಮಾದ ಕಾವಾಲಯ್ಯ ಹಾಡಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ ನಟಿ ವೈಷ್ಣವಿ ಗೌಡ, ವೈರಲ್ ಆದ ವಿಡಿಯೋ…..!

Follow Us :

ಕನ್ನಡದ ಕಿರುತೆರೆಯ ನಟಿಯರಲ್ಲಿ ಮಿಲ್ಕಿ ಬ್ಯೂಟಿ ಎಂದೇ ಕರೆಯಲಾಗುವ ವೈಷ್ಣವಿ ಗೌಡ ರವರ ಬಗ್ಗೆ ಪರಿಚಯದ ಅಗತ್ಯವಿಲ್ಲ. ವೈಷ್ಣವಿ ಗೌಡ ಅಗ್ನಿಸಾಕ್ಷಿ ಸಿನೆಮಾದ ಮೂಲಕ ಫೇಮ್ ದಕ್ಕಿಸಿಕೊಂಡಿದ್ದು, ಕಿರುತೆರೆಯಲ್ಲಿ ದೊಡ್ಡ ಮಟ್ಟದ ಫಾಲೋಯಿಂಗ್ ಬೆಳೆಸಿಕೊಂಡಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದ ಮೂಲಕವೂ ಆಕೆ ಅಪಾರ ಸಂಖ್ಯೆಯ ಫಾಲೋಯಿಂಗ್ ಹೊಂದಿದ್ದಾರೆ. ಸದಾ ಪೊಟೋಗಳು, ರೀಲ್ಸ್ ಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಸೂಪರ್‍ ಸ್ಟಾರ್‍ ರಜನಿಕಾಂತ್ ರವರ ಜೈಲರ್‍ ಸಿನೆಮಾದ ಕಾವಲಯ್ಯ ಹಾಡಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದು ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಕನ್ನಡದ ಸೀರಿಯಲ್ ನಟಿ ವೈಷ್ಣವಿ ಗೌಡ ಮೊದಲನೇ ಧಾರವಾಹಿಯ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿಕೊಂಡ ವೈಷ್ಣವಿ ದೇವಿ ಎಂಬ ಸೀರಿಯಲ್ ಮೂಲಕ ಕಿರುತೆರೆಗೆ ಪ್ರವೇಶ ಮಾಡಿದರು. ಬಳಿಕ ಆಕೆಗೆ ಬಿಗ್ ಬ್ರೇಕ್ ನೀಡಿದ್ದು ಅಗ್ನಿಸಾಕ್ಷಿ ಸೀರಿಯಲ್ ಎನ್ನಬಹುದಾಗಿದೆ. ಈ ಸೀರಿಯಲ್ ನಲ್ಲಿ ಸನ್ನಿಧಿ ಎಂಬ ಪಾತ್ರದಲ್ಲಿ ಆಕೆ ಅಭಿನಯಿಸಿದ್ದು, ಇಂದಿಗೂ ಸಹ ಅಪಾರ ಸಂಖ್ಯೆಯ ಅಭಿಮಾನಿಗಳ ಮನದಲ್ಲಿ ಮನೆ ಮಾಡಿದೆ. ಸ್ಟಾರ್‍ ನಟಿಯರಂತೆ ವೈಷ್ಣವಿ ಸಹ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಹೊಂದಿದ್ದಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಳ್ಳುವಂತಹ ಪೋಸ್ಟ್ ಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತದೆ. ಇದೀಗ ಆಕೆ ಕಾವಲಯ್ಯ ಹಾಡಿಗೆ ಭರ್ಜರಿಯಾಗಿ ಕುಣಿಯುವ ರೀಲ್ಸ್ ಒಂದನ್ನು ಹಂಚಿಕೊಂಡಿದ್ದು, ಸಖತ್ ಸದ್ದು ಮಾಡುತ್ತಿದೆ.

ಸೂಪರ್‍ ಸ್ಟಾರ್‍ ರಜನಿಕಾಂತ್ ಹಾಗೂ ಮಿಲ್ಕಿ ಬ್ಯೂಟಿ ತಮನ್ನಾ ಅಭಿನಯದ ಜೈಲರ್‍ ಸಿನೆಮಾ ಇನ್ನೇನೂ ಕೆಲವೇ ದಿನಗಳಲ್ಲಿ ಅಭಿಮಾನಿಗಳ ಮುಂದೆ ಬರಲಿದೆ. ಈ ಸಿನೆಮಾದ ಫಸ್ಟ್ ಸಿಂಗಲ್ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿಗೆ ಕೇವಲ ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸ್ಟಾರ್‍ ನಟಿಯರೂ ಸಹ ಹೆಜ್ಜೆ ಹಾಕಿದ್ದಾರೆ. ಇದೀಗ ನಟಿ ವೈಷ್ಣವಿ ಗೌಡ ಸಹ ಎನರ್ಜಿಟಿಕ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಇನ್ನೂ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಆದರೆ ವೈಷ್ಣವಿ ಗೌಡ ಕಾಮೆಂಟ್ ಬಾಕ್ಸ್ ಆಫ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ಹೊಗಳುವ ಅವಕಾಶ ಇಲ್ಲದಂತಾಗಿದೆ ಎಂದು ಅಭಿಮಾನಿಗಳು ನಿರಾಸೆ ವ್ಯಕ್ತಪಡಿಸಿದ್ದಾರೆ.

ಇನ್ನೂ ವೈಷ್ಣವಿ ಗೌಡ ತಮ್ಮ ವಿಡಿಯೋಗೆ ನೆಗೆಟೀವ್ ಕಾಮೆಂಟ್ ಗಳ ಬರಬಾರದೆಂಬ ದೃಷ್ಟಿಯಿಂದ ಕಾಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ. ನಟಿ ವೈಷ್ಣವಿ ಗೌಡ ಕಿರುತೆರೆಯಲ್ಲಿ ಸ್ಟಾರ್‍ ಆಗಿದ್ದಾರೆ ಎಂದೇ ಹೇಳಬಹುದಾಗಿದೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಿಮೆ ಸಮಯದಲ್ಲೇ ಆಕೆಯ ಪೋಸ್ಟ್ ಗಳೂ ಸಹ ವೈರಲ್ ಆಗುತ್ತಿರುತ್ತವೆ.