ಗುಡ್ ನ್ಯೂಸ್ ಕೊಟ್ಟಿರುವ ನಟಿ ಅಮೂಲ್ಯ ತಾಯಿಯಾಗುತ್ತಿದ್ದಾರೆ

ಸ್ಯಾಂಡಲ್ ವುಡ್ ನ ಗೋಲ್ಡನ್ ಗರ್ಲ್ ಎಂದೇ ಖ್ಯಾತಿಯಾಗಿರುವ ನಟಿ ಅಮೂಲ್ಯ ಅವರು ಅಭಿಮಾನಿಗಳ ಜೊತೆ ಒಂದು ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಬಾಲನಟಿಯಾಗಿ ಖ್ಯಾತಿ ಪಡೆದಿದ್ದ ನಟಿ ಅಮೂಲ್ಯ ಈಗ ತಾಯಿಯಾಗುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಪೋಸ್ಟ್ ಮಾಡಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್, ಇನ್ನು ಮುಂದೆ ನಾವಿಬ್ಬರಲ್ಲ ಎಂದಿದ್ದಾರೆ.. ಬೇಸಿಗೆಯಲ್ಲಿ ಮಗು ಬರಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಮುದ್ದಾದ ಫೋಟೋ ಶೂಟ್ ಮಾಡಿಸಿಕೊಂಡಿರುವ ಅಮೂಲ್ಯ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. 2017 ರ ಮೇ 12ರಂದು ಅಮೂಲ್ಯ ಮತ್ತು ಜಗದೀಶ್ ವಿವಾಹ ಮಂಡ್ಯ ಜಿಲ್ಲೆಯ ಆಧಿ ಚುಂಚನಗಿರಿ ಮಠದಲ್ಲಿ ನಡೆದಿತ್ತು.

ಮದುವೆಯ ಬಳಿಕ ಚಂದನವನದಿಂದ ದೂರ ಸರಿದಿದ್ದ ಅಮೂಲ್ಯ ಪತಿ ಜಗದೀಶ್ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಇದೀಗ ಅವರು ಅಭಿಮಾನಿಗಳ ಜೊತೆ ಈ ಖುಷಿ ವಿಚಾರ ಹಂಚಿಕೊಂಡಿದ್ದಾರೆ. ಅವರು ತಾಯಿಯಾಗುತ್ತಿರುವ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಂಚಿಕೊಂಡಿದ್ದಾರೆ.

ಈ ಫೋಟೋ ನೋಡಿದ ಅಭಿಮಾನಿಗಳು ತುಂಬಾ ಖುಷಿ ಪಟ್ಟಿದ್ದಾರೆ ಮತ್ತು ಅಮೂಲ್ಯ ಜಗದೀಶ್ ಜೋಡಿಗೆ ಶುಭಾಶಯಗಳನ್ನು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಈ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ.

Previous articleಅರ್ಜುನ್ ಸರ್ಜಾ ಅವರ ವಿರುದ್ಧ ಶ್ರುತಿ ಹರಿಹರನ್ ಮಾಡಿದ ಆರೋಪ ಸುಳ್ಳೇ?
Next articleಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಹಿರಿಯನಟ ಶಿವರಾಮ್