ಕೊಡುಗು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, 64 ಹುದ್ದೆಗಳ ನೇಮಕಾತಿ…..!

ಕೊಡುಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವಂತಹ ಸ್ಟೇನೋಗ್ರಾಫರ್‍, ಜವಾನ ಸೇರಿದಂತೆ ಒಟ್ಟು 64 ಹುದ್ದೆಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ. ನ.10 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಡಿ. 10 ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ…

ಕೊಡುಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವಂತಹ ಸ್ಟೇನೋಗ್ರಾಫರ್‍, ಜವಾನ ಸೇರಿದಂತೆ ಒಟ್ಟು 64 ಹುದ್ದೆಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ. ನ.10 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಡಿ. 10 ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರಕ್ಕೆ ಬಂದರೇ, ಸ್ಟೆನೋಗ್ರಾಫರ್​​ 2, ಟೈಪಿಸ್ಟ್​​ 17, ಟೈಪಿಸ್ಟ್​- ಕಾಪಿಸ್ಟ್​​ 7, ಪ್ರೊಸೆಸ್​ ಸರ್ವರ್​ 8, ಜವಾನ 30 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು, ಉಳಿದ ಹುದ್ದೆಗಳಿಗೆ ಪಿಯುಸಿ ಉತ್ತೀರ್ಣದ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವಂತಹ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಪರೀಕ್ಷೆಯಲ್ಲಿ ಹಿರಿಯ ದರ್ಜೆಯಲ್ಲಿ ಪಾಸ್ ಆಗಿದ್ದು, ಸಾಮಾನ್ಯ ಕಂಪ್ಯೂಟರ್‍ ಜ್ಞಾನ ಸಹ ಹೊಂದಿರಬೇಕು. ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಟೈಪಿಂಗ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ಮತ್ತು ಗರಿಷ್ಟ 35 ವರ್ಷ ಆಗಿದೆ. ಪ.ಜಾತಿ ಹಾಗೂ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಪ.ಜಾತಿ ಹಾಗೂ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 150 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು kodagu.dcourts.gov.in/notice-category/recruitments/ ತಾಣಕ್ಕೆ ಭೇಟಿ ನೀಡಬಹುದಾಗಿದೆ.