ಕಾವೇರಿ ನದಿ ನೀರು ವಿವಾದ, ಮಂಗಳವಾರ ಬೆಂಗಳೂರು ಬಂದ್ ಗೆ ಕರೆ….!

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26 ರಂದು ಬೆಂಗಳೂರು ಬಂದ್ ನಡೆಸಲು ಸುಮಾರು 150 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕಾವೇರಿ ನದಿ ನೀರು ವಿವಾದ ಸುಮಾರು ವರ್ಷಗಳಿಂದ ನಡೆಯುತ್ತಲೇ ಇದೆ. ಈಗಾಗಲೇ ಇಂದು (ಸೆ.23) ರಂದು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗಿದೆ. ಇದೀಗ ಬೆಂಗಳೂರು ಬಂದ್ ಮಾಡಲು ಸಂಘಟನೆಗಳು ತೀರ್ಮಾನ ಕೈಗೊಂಡಿದೆ.

ಕಾವೇರಿ ನದಿಯನ್ನು ನಂಬಿಕೊಂಡು ಅನೇಕರು ಜೀವನ ಸಾಗಿಸುತ್ತಿದ್ದಾರೆ. ಅದರಲ್ಲೂ ಕೆಲವು ಜಿಲ್ಲೆಗಳು ಕಾವೇರಿ ನದಿ ನೀರನ್ನು ನಂಬಿಕೊಂಡಿದ್ದು, ಇದೀಗ ಕಾವೇರಿ ಹೋರಾಟ ಕಿಚ್ಚು ಜೋರಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಭಾರಿ ಆಕ್ರೋಷ ವ್ಯಕ್ತವಾಗುತ್ತಿದೆ. ಈಗಾಗಲೇ ಮಂಡ್ಯ ಬಂದ್ ಸಹ ನಡೆದಿದ್ದು, ಯಶಸ್ವಿಯಾಗಿದೆ. ಇದೀಗ ಬೆಂಗಳೂರಿನಲ್ಲೂ ಸಹ ಬಂದ್ ಆಚರಿಸಲು ತಿರ್ಮಾನ ತೆಗೆದುಕೊಳ್ಳಲಾಗಿದೆ. ಸೆ.26 ರಂದು ಬೆಂಗಳೂರಿನಲ್ಲಿ ಒಂದು ದಿನದ ಬಂದ್ ಮಾಡಲು ವಿವಿಧ ಸಂಘಟನೆಗಳು ತಿರ್ಮಾನಿಸಿದೆ. ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೂ ಬೃಹತ್ ಮೆರವಣಿಗೆಯನ್ನು ಸಹ ನಡೆಸಲು ಸಂಘಟನೆಗಳು ತೀರ್ಮಾನ ಮಾಡಿದೆ ಎನ್ನಲಾಗಿದೆ.

ಇನ್ನೂ ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರೂ ಸಹ ರಿಯಾಕ್ಟ್ ಆಗಿದ್ದಾರೆ. ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸುತ್ತಿದ್ದೇನೆ. ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸುತ್ತೇನೆ. ಕಾವೇರಿ ವಿವಾದದ ಬಗೆಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ನಮಗೆ ನೀರಿಲ್ಲ ಅಂತಹುದರಲ್ಲಿ ತಮಿಳುನಾಡಿಗೆ ನೀರು ಹರಿಸುವುದರಿಂದ ನಮ್ಮ ನಾಡಿನ ರೈತರಿಗೆ ಅನ್ಯಾಯವಾಗಲಿದೆ ಎಂದಿದ್ದಾರೆ.