News

ರಾಮೇಶ್ವರಂ ಕೆಫೆ ಸ್ಟೋಟ ಪ್ರಕರಣ: ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದ ಎನ್.ಐ.ಎ….!

ಕಳೆದೆರಡು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್.ಐ.ಎ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಎಂಬಾತನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಟೋಟಕ್ಕೆ ಸಂಬಂಧಿಸಿದಂತೆ ಕಳೆದ ವಾರ ತೀರ್ಥಹಳ್ಳಿಯಲ್ಲಿ ಎನ್.ಐ.ಎ ಅಧಿಕಾರಿಗಳು ಧಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಮುಸ್ಲೀಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿಗಳಲ್ಲಿ ಶೋಧ ನಡೆಸಿದ್ದರು. ಇದೇ ಮುಸ್ಲೀಂ ಯುವಕರ ಜೊತೆಗೆ ಸಂಪರ್ಕದಲ್ಲಿದ್ದ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಎಂಬಾತನನ್ನು ಇದೀಗ ಎನ್.ಐ.ಎ ಅಧಿಕಾರಿಗಳು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇನ್ನೂ ಬಾಂಬ್ ಸ್ಪೋಟದ ಪ್ರಮುಖ ಸಂಚುಕೋರನ ತಾಯಿಗೆ ಚಿಕ್ಕಮಗಳೂರಿನಲ್ಲಿ ಮನೆ ಬಾಡಿಗೆಗೆ ಕೊಡಿಸಲು ಸಹಾಯ ಮಾಡಿದ್ದು, ಪೊಲೀಸ್ ಇನ್ಸ್ ಪೆಕ್ಟರ್‍ ಎಂಬ ಸ್ಪೋಟಕ ಮಾಹಿತಿ ಹೊರಬಂದಿದೆ.

ಇನ್ನೂ ಬಾಂಬ್ ಸ್ಪೋಟದ ಪ್ರಮುಖ ಸಂಚುಕೊರ ಮುಜಾಮಿಲ್ ಶರೀಫ್ ಕಳಸ ಮೂಲದವನು. ಆತ ತನ್ನ ತಾಯಿಯನ್ನು ಚಿಕ್ಕಮಗಳೂರಿಗೆ ಕರೆತಂದಯ ಬಾಡಿಗೆ ಮನೆಯಲ್ಲಿರಿಸಲು ಸಹಾಯ ಮಾಡಿದ್ದು, ಇಲ್ಲಿನ ಪೊಲೀಸ್ ಇನ್ಸ್ ಪೆಕ್ಟರ್‍ ಎಂದು ಹೇಳಲಾಗುತ್ತಿದೆ. ಈ ಇನ್ಸ್ ಪೆಕ್ಟರ್‍ ದುಬೈ ನಗರದಲ್ಲಿ ಬಾಡಿಗೆ ಮನೆ ಹುಡುಕಿಕೊಟ್ಟಿದ್ದರು ಇದೇ ಮನೆಯಲ್ಲಿ ಮುಜಾಮಿಲ್ ತಾಯಿ ವಾಸವಿದ್ದರಂತೆ. ಆದ್ದರಿಂದ ಮುಜಾಮಿಲ್ ಗೂ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್‍ ಇಬ್ಬರ ಆತ್ಮೀಯತೆ ಇತ್ತಾ ಎಂಬ ಸಂಶಯದ ಹಿನ್ನೆಲೆ ಸಿಪಿಐ ಗೆ ಎನ್.ಐ.ಎ ನೊಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

Most Popular

To Top