ಬೆಸ್ಕಾಂ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ, ಒಂದು ವರ್ಷದ ಅವಧಿಗೆ 400 ಹುದ್ದೆಗಳ ಭರ್ತಿ…..!

Follow Us :

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲೊಂದು ಸುವರ್ಣವಕಾಶವಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ ನಲ್ಲಿ) 400 ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಡಿ.31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ: ಪದವೀಧರ ಅಪ್ರೆಂಟಿಸ್​​ ವಿಭಾಗದಲ್ಲಿ ಎಲೆಕ್ಟ್ರಿಕಲ್​ ಮತ್ತು ಎಲೆಕ್ಟ್ರಾನಿಕ್ಸ್​ ಇಂಜಿನಿಯರಿಂಗ್​ – 143 ಹುದ್ದೆಗಳು, ಎಲೆಕ್ಟ್ರಾನಿಕ್ಸ್​ ಮತ್ತು ಕಮ್ಯೂನಿಕೇಷನ್​ ಇಂಜಿನಿಯರಿಂಗ್​​ – 116 ಹುದ್ದೆಗಳು, ಕಂಪ್ಯೂಟರ್​ ಸೆನ್ಸ್​ ಮತ್ತು ಇಂಜಿನಿಯರಿಂಗ್​​ – 36 ಹುದ್ದೆಗಳು, ಇನ್ಫಾರ್ಮೆಷನ್​ ಸೈನ್ಸ್​ ಮತ್ತು ಇಂಜಿನಿಯರಿಂಗ್​​ – 20 ಹುದ್ದೆಗಳು, ಸಿವಿಲ್​ ಇಂಜಿನಿಯರಿಂಗ್​ – 5 ಹುದ್ದೆಗಳು, ಇನ್ಸ್ಟುಮೆಂಟೆಷನ್​ ಟೆಕ್ನಾಲಜಿ ಇಂಜಿನಿಯರಿಂಗ್​​- 5 ಹುದ್ದೆಗಳಿವೆ. ಟೆಕ್ನಿಶಿಯನ್​ (ಡಿಪ್ಲೊಮಾ) ಅಪ್ರೆಂಟಿಸ್​​ ವಿಭಾಗದಲ್ಲಿ ಎಲೆಕ್ಟ್ರಿಕಲ್​ ಅಂಡ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್- 55 ಹುದ್ದೆಗಳು, ಎಲೆಕ್ಟ್ರಾನಿಕ್ಸ್​ ಅಂಡ್​ ಕಮ್ಯೂನಿಕೇಷನ್​ ಇಂಜಿನಿಯರಿಂಗ್​ – 10 ಹುದ್ದೆಗಳು, ಕಂಪ್ಯೂಟರ್​ ಸೈನ್ಸ್​ ಅಂಡ್​ ಇಂಜಿನಿಯರಿಂಗ್​ – 10 ಹುದ್ದೆಗಳ ಭರ್ತಿ ನಡೆಯಲಿದೆ.

ಇನ್ನೂ ಪದವೀಧರ ಅಪ್ರೆಂಟಿಸ್​ ಹುದ್ದೆಗೆ ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಂಬಂಧಿತ ಬ್ರಾಂಚ್​ನಲ್ಲಿ ಬಿಇ, ಬಿಟೆಕ್​ ಪದವಿಯನ್ನು ಹೊಂದಿರಬೇಕು. ಟೆಕ್ನಿಶಿಯನ್​ ಅಪ್ರೆಂಟಿಸ್​ ಹುದ್ದೆಗೆ 3 ವರ್ಷದ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು. 2019ರಿಂದ 2023 ಅಕ್ಟೋಬರ್​ವರೆಗೆ ವಿದ್ಯಾಭ್ಯಾಸವನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.  ಈ ಹುದ್ದೆಗಳನ್ನು ಅಪ್ರೆಂಟಿಸ್​ ಕಾಯ್ದೆ 1961ರ ಪ್ರಕಾರ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಲಾಗುವುದು. ಪದವೀಧರ ಅಪ್ರೆಂಟಿಸ್​ ಹುದ್ದೆಗೆ ಮಾಸಿಕ 9000 ಮತ್ತು ಡಿಪ್ಲೊಮಾ ಪದವೀಧರರಿಗೆ ಮಾಸಿಕ 8000 ರೂ. ಶಿಷ್ಯ ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್​ ಮೂಲಕ ಮಾತ್ರ ಆಯ್ಕೆ ಮಾಡಲಾಗುವುದು. ಆಯ್ಕೆ ಅಭ್ಯರ್ಥಿಗಳಿಗೆ ಇಮೇಲ್​ ಮೂಲಕ ತಿಳಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸದಲ್ಲಿ ತಿಳಿಸಿದ ದಿನಾಂಕದಂದು ದಾಖಲೆ ಪರಿಶೀಲನೆಗೆ ಹಾಜರಾಗಬೇಕು. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿ.11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕವಾಗಿದ್ದು, ಜ.8 ರಂದು ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು bescom.org ತಾಣಕ್ಕೆ ಭೇಟಿ ನೀಡಬಹುದಾಗಿದೆ.