News

BIG BREAKING : ದೇಶದಲ್ಲಿ 24 ಗಂಟೆಗಳಲ್ಲಿ 909 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆ : ಸೋಂಕಿತರ ಸಂಖ್ಯೆ 8356ಕ್ಕೆ ಏರಿಕೆ

ದೇಶದಲ್ಲಿ ಮಾರಕ ಕೊರೊನಾ ಸೋಂಕು ಜನತೆಯನ್ನು ತಲ್ಲಣ ಸೃಷ್ಟಿಸಿದೆ. ಅಗತ್ಯ ಮುಂಜಾಗ್ರತೆ ವಹಿಸಿದ್ದರೂ ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 909 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, 34 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 909 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ, ಸೋಂಕು ಪೀಡಿತರ ಸಂಖ್ಯೆ 8356ಕ್ಕೆ ಏರಿಕೆಯಾಗಿದೆ. ಇನ್ನು 34 ಮಂದಿ ಬಲಿಯಾಗಿದ್ದು, ಈವರೆಗೆ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ273ಕ್ಕೆ ಏರಿಕೆಯಾಗಿದೆ. ಇನ್ನು ಕೊರೊನಾ ಪಾಸಿಟಿವ್ ಬಂದಿರುವ 8356 ಪ್ರಕರಣಗಳ ಪೈಕಿ ಸದ್ಯ 7367 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 716 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ…

Trending

To Top