News

Big News : ಮೇ 3ರ ನಂತರವೂ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ?

ನಾಳೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಮೇ 3 ರ ನಂತರವೂ ಲಾಕ್ಡೌನ್ ಮುಂದುವರೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಹಲವೆಡೆ ಸೋಂಕಿತರು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರೆಸಬಹುದೆಂದು ಹೇಳಲಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ 1999 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಪರಿಸ್ಥಿತಿ ಗಂಭೀರವಾಗಿರುವುದರಿಂದ ಲಾಕ್ ಡೌನ್ ಮುಂದುವರಿಸುವುದೇ? ಬೇಡವೇ? ಎನ್ನುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ. ಆರ್ಥಿಕತೆಗಿಂತ ಜನರ ಜೀವ ಮುಖ್ಯ ಎಂದು ಮೋದಿ ಹೇಳಿದ್ದು ಮೇ ಅಂತ್ಯದವರೆಗೂ ಲಾಕ್ಡೌನ್ ಮುಂದುವರೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಕೊರೋನಾ ಸೋಂಕು ಇಲ್ಲದ ಪ್ರದೇಶಗಳಲ್ಲಿ ಮತ್ತು ಗ್ರೀನ್ ಜೋನ್ ಗಳಲ್ಲಿ ಈಗಾಗಲೇ ನಿರ್ಬಂಧ ಸಡಿಲಗೊಳಿಸಲಾಗಿದೆ. ಆದರೆ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಮೇ ಅಂತ್ಯದವರೆಗೆ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Trending

To Top