Film News

ರೀಲ್ಸ್ ರಾಣಿ ಸೋನು ಗೌಡ ಬಂಧನ, ಮಗುವನ್ನು ದತ್ತು ಪಡೆದ ಸೋನು ಗೌಡ ಯಾವೆಲ್ಲಾ ನಿಯಮಗಳು ಉಲ್ಲಂಘಿಸಿದ್ದಾರೆ ಗೊತ್ತಾ?

ಸೋಷಿಯಲ್ ಮಿಡಿಯಾ ಮೂಲಕವೇ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಮತಷ್ಟು ಫೇಮಸ್ ಆದರು. ಸದಾ ಒಂದಲ್ಲ ಒಂದು ಕಾರಣದಿಂದ ಸುದ್ದಿಯಾಗುವ ಸೋನು ಗೌಡ ರವರನ್ನು ಇದೀಗ ಪೊಲೀಸರು ಬಂಧನ ಮಾಡಿದ್ದಾರೆ. ಅಕ್ರಮವಾಗಿ ಮಗುವನ್ನು ದತ್ತು ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಬ್ಯಾಡರಹಳ್ಳಿ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಇತ್ತೀಚಿಗಷ್ಷೆ ಬಿಗ್ ಬಾಸ್ ಬ್ಯೂಟಿ ಸೋನು ಶ್ರೀನಿವಾಸ್ ಗೌಡ ಮಗುವನ್ನು ದತ್ತು ಪಡೆದುಕೊಂಡಿದ್ದಾಗಿ ಆಕೆಯೇ ಸೋಷಿಯಲ್ ಮಿಡಿಯಾ ಮೂಲಕ ಹೇಳಿಕೊಂಡಿದ್ದರು. ಈ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಆಕೆಯನ್ನು ಬ್ಯಾಡರಹಳ್ಳಿ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಮೂಲಕ ಬಂಧನ ಮಾಡಿದ್ದಾರೆ. ಇನ್ನೂ ಮಗುವನ್ನು ದತ್ತು ಪಡೆದುಕೊಳ್ಳುವ ಯಾವುದೇ ನಿಯಮಗಳನ್ನು ಸೋನು ಶ್ರೀನಿವಾಸ್ ಗೌಡ ಪಾಲನೆ ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಈ ಕುರಿತು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಕಾನೂನು ಪರಿವೀಕ್ಷಣಾಧಿಕಾರಿ ಗೀತಾ ಮಾದ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸೋನು ಗೌಡ ಒಂದು ಮಗುವನ್ನು ದತ್ತು ಪಡೆದು ಸೋಷಿಯಲ್ ಮಿಡಿಯಾದಲ್ಲಿ ಹಾಕಿಕೊಂಡಿದ್ದರು. ಆದರೆ ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಮೆರೇಗೆ ಆಕೆಯನ್ನು ಬಂಧಿಸಲಾಗಿದೆ.

ಸೋನು ಗೌಡ ನಿಯಮಗಳ ಪ್ರಕಾರ ಮಗುವನ್ನು ದತ್ತು ಪಡೆದಿಲ್ಲ. ಯಾರೇ ಮಗುವನ್ನು ದತ್ತು ಪಡೆಯಬೇಕಾದರೇ ನಿಯಮಗಳಂತೆ ಪಡೆದುಕೋಳ್ಳಬೇಕು. ಆದರೆ ಸೋನುಗೌಡ ಯಾವುದೇ ನಿಯಮಗಳನ್ನು ಪಾಲನೆ ಮಾಡಿಲ್ಲ. ಮಗುವನ್ನು ಹೊರಗೆ ತೋರಿಸುವಂತಿಲ್ಲ ಜೊತೆಗೆ ಕುಟುಂಬಸ್ಥರ ಮಾಹಿತಿಯನ್ನು ಸಹ ಬಹಿರಂಗ ಪಡಿಸುವಂತಿಲ್ಲ. ಆದರೆ ಸೋನು ಗೌಡ ಲೈವ್ ಮೂಲಕ ಈ ಎಲ್ಲಾ ವಿಚಾರಗಳನ್ನು ಹೊರಹಾಕಿದ್ದಾರೆ. ಮಗುವನ್ನು ಸಾಕುವಷ್ಟು ಪೋಷಕರಲ್ಲಿ ಆರ್ಥಿಕ ಸಾಮರ್ಥ್ಯ ಇದೆಯೇ ಇಲ್ಲವೇ ಎಂಬುದನ್ನು ಪರಿಗಣಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಸೋನು ರವರಿಗೆ ಮದುವೆ ಆಗಿಲ್ಲ. ದತ್ತು ಪಡೆಯುವವರು ಹಾಗೂ ಮಗುವಿನ ವಯಸ್ಸಿನ ಅಂತರ 25 ವರ್ಷಗಳಿರಬೇಕಾಗುತ್ತಿದೆ. ವಿಡಿಯೋದಲ್ಲಿ ಮಗುವಿನ ಕುಟುಂಬದಿಂದ ಅನುಮತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಈ ಕಾರಣದಿಂದ ಮಗುವನ್ನು ಮಾರಾಟ ಮಾಡಿದ್ದಾರೆಯೇ ಎಂಬ ಅನುಮಾನ ಸಹ ಇಲ್ಲಿ ಮೂಡಿದೆ.

ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆ 1956 ರಂತೆ ಮಗುವನ್ನು ದತ್ತು ಪಡೆಯುವ ಪ್ರಕ್ರಿಯೆಯ ನಿಯಮಗಳನ್ನು ಸಂಪೂರ್ಣವಾಗಿ ಪಾಲನೆ ಮಾಡಬೇಕಾಗುತ್ತದೆ. ಇದಕ್ಕಾಗಿ ಮಕ್ಕಳ ರಕ್ಷಣಾ ಘಟಕ, ರಾಜ್ಯ ದತ್ತು ಪ್ರಾಧಿಕಾರ, ಆಕೆ ನೆಲೆಸಿರುವ ವಿಳಾಸ ಎಲ್ಲಾ ಮಾಹಿತಿ ಪಡೆದು ನಿಯಮಗಳಂತೆ ಮಕ್ಕಳ ಕಲ್ಯಾಣ ಸಮಿತಿಯ ಸಮ್ಮುಖದಲ್ಲಿ ಮಗುವನ್ನು ದತ್ತು ಪಡೆಯಬೇಕು. ಆದರೆ ಸೋನು ಗೌಡ ಯಾವುದೇ ನಿಯಮ ಪಾಲನೆ ಮಾಡಿಲ್ಲ ಎಂದು ಹೇಳಲಾಗಿದೆ.

Most Popular

To Top