News

ಬಂಡಾಯವೆದ್ದ ಈಶ್ವರಪ್ಪಗೆ ಶಾಕ್ ಕೊಟ್ಟ ಬಿಜೆಪಿ, 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ…..!

ತನ್ನ ಮಗನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣದಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬಂಡಾಯವೆದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ದ ಬಂಡಾಯವೆದ್ದಿದ್ದಾರೆ. ಈ ಕಾರಣದಿಂದ ಈಶ್ವರಪ್ಪ ರವರ ವಿರುದ್ದ ಶಿಸ್ತು ಕ್ರಮ ತೆಗೆದುಕೊಂಡಿದ್ದು, 6 ವರ್ಷಗಳ ಕಾಲ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ, ರಾಜ್ಯ ಬಿಜೆಪಿ ಶಿಸ್ತು ಸಮಿತಿ ಆದೇಶ ನೀಡಿದೆ.

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ತಮ್ಮ ಮಗನಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಬಯಸಿದ್ದರು. ಆದರೆ ಟಿಕೆಟ್ ನೀಡದ ಕಾರಣದಿಂದ ಬಿಜೆಪಿ ನಾಯಕರ ವಿರುದ್ದ ಆಕ್ರೋಷ ಹೊರಹಾಕಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರ ವಿರುದ್ದ ಸ್ಪರ್ಧೆ ಮಾಡುತ್ತಿದ್ದಾರೆ. ಪಕ್ಷದಿಂದ ಉಚ್ಚಾಟನೆ ಕುರಿತಂತೆ ಈಶ್ವರಪ್ಪನವರಿಗೆ ಲಿಖಿತವಾಗಿ ಸೂಚನೆ ನೀಡಲಾಗಿತ್ತು. ಆದರೂ ಸಹ ಈಶ್ವರಪ್ಪ ಪಟ್ಟು ಬಿಡದೇ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಾರಣ ಪಕ್ಷಕ್ಕೆ ಮುಜುಗರವಾಗಿದೆ. ಇದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದ್ದು, ತಮ್ಮನ್ನು ತಕ್ಷಣದಿಂದ ಜಾರಿ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಲಾಗಿದೆ ಎಂದು ಆದೇಶ ನೀಡಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರ ಪುತ್ರರಾದ ಬಿ.ವೈ.ವಿಜಯೇಂದ್ರ ಹಾಗೂ ಬಿ.ವೈ.ರಾಘವೇಂದ್ರ ವಿರುದ್ದ ಈಶ್ವರಪ್ಪ ತೊಡೆ ತಟ್ಟಿ, ರಾಘವೇಂದ್ರವರನ್ನು ಸೋಲಿಸುತ್ತೇವೆ ಎಂದು ಈಶ್ವರಪ್ಪ ಗುಡುಗಿದ್ದರು. ಕೊನೆ ಕ್ಷಣದಲ್ಲಾದರೂ ನಾಮಪತ್ರ ವಾಪಸ್ಸು ಪಡೆಯುತ್ತಾರೆ ಎಂದು ಕಾದಿದ್ದರು. ಆದರೆ ತಮ್ಮ ಸ್ಪರ್ಧೆ ಖಚಿತ ಎಂದು ಸಂದೇಶ ರವಾನಿಸಿದ್ದರು. ಇನ್ನೂ ಕೆ.ಎಸ್.ಈಶ್ವರಪ್ಪ ರವರಿಗೆ ಚುನಾವಣಾ ಆಯೋಗದಿಂದ ಚಿಹ್ನೆ ಸಹ ನೀಡಲಾಗಿದೆ. ಈಶ್ವರಪ್ಪ ರವರಿಗೆ ಚುನಾವಣಾ ಆಯೋಗದಿಂದ ಕೈ ಕಟ್ಟಿಕೊಂಡ ರೈತ ಹಾಗೂ ಎರಡು ಕಬ್ಬುಗಳು ಇರುವ ಚಿಹ್ನೆಯನ್ನು ಅವರಿಗೆ ನೀಡಲಾಗಿದೆ. ಈ ಬಾರಿ ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರ ಸಹ ಹೈ ವೋಲ್ಟೇಜ್ ಕದನವಾಗಿದೆ ಎಂದೇ ಹೇಳಬಹುದು.

Most Popular

To Top