News

ಲೋಕಸಭೆ ಚುನಾವಣೆ ಮುಗಿದ 6 ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದ ಸಂಸದ ನಳಿನ್ ಕುಮಾರ್….!

ದೇಶದಾದ್ಯಂತ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಚುನಾವಣಾ ಅಧಿಸೂಚನೆ ಘೊಷಣೆಯಾಗಿದ್ದು, ರಾಜ್ಯದಲ್ಲಿ ಪಕ್ಷಗಳ ಮುಖಂಡರು ಹಾಗೂ ಅಭ್ಯರ್ಥಿಗಳು ತಮ್ಮದೇ ಆದ ಶೈಲಿಯಲ್ಲಿ ಪ್ರಚಾರ ಸಹ ಶುರು ಮಾಡಿದ್ದಾರೆ. ಚುನಾವಣೆ ತಯಾರಿ ಬಗ್ಗೆ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್‍ ಕಟೀಲ್ ಪದಾಧಿಕಾರಿಗಳ ಸಭೆ ನಡೆಸಿದ್ದರು. ಈ ವೇಳೆ ಕ್ಷೇತ್ರದ ಅಭ್ಯರ್ಥಿ ಭಾರಿ ಅಂತರದಲ್ಲಿ ಬ್ರಿಜೇಶ್ ಚೌಟರವರನ್ನು ಗೆಲ್ಲಿಸುವುದಾಗಿ ತಿಳಿಸಿದರು. ಇದೇ ಸಮಯದಲ್ಲಿ ಕಾರ್ಯಕರ್ತರಿಗೆ ಹೊಸ ಸೂಚನೆ ಸಹ ನೀಡಿದ್ದಾರೆ.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್‍ ಕಟಿಲ್, ಈ ಬಾರಿ ಮೋದಿಯವರನ್ನು ಗೆಲ್ಲಿಸಲು ನಾವೆಲ್ಲ ಪಣ ತೊಡಬೇಕು. ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿರುವ ಬ್ರಿಜೇಶ್ ಚೌಟ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ಕರೆ ಕೊಟ್ಟರು. ಇದೇ ಸಮಯದಲ್ಲಿ ಲೋಕಸಭಾ ಚುನಾವಣೆ ಮುಗಿದ ಮೇಲೆ 6 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ. ತಾವೆಲ್ಲರೂ ವಿಧಾನಸಭೆ ಚುನಾವಣೆಗೆ ತಯಾರಿಗಳನ್ನು ನಡೆಸಿ. ಈ ಭಾರಿ ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಮ್ಮ ಸರ್ಕಾರ ಆಡಳಿತ ನಡೆಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ಇದೇ ಸಮಯದಲ್ಲಿ ಕೆ.ಎಸ್.ಈಶ್ವರಪ್ಪ ರವರ ಬಗ್ಗೆ ಸಹ ಮಾತನಾಡಿದ್ದಾರೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಕೆ.ಎಸ್.ಈಶ್ವರಪ್ಪರವರಿಗೆ ನೋವಾಗಿದೆ. ಅವರು ಸ್ವತಂತ್ರವಾಗಿ ಸ್ಫರ್ಧೆ ಮಾಡುವ ವಿಚಾರದ ಕುರಿತು ಈಗಾಗಲೇ ರಾಜ್ಯದ ನಾಯಕರು ಸೇರಿದಂತೆ ಕೇಂದ್ರ ನಾಯಕರೂ ಸಹ ಮಾತುಕತೆ ನಡೆಸುತ್ತಿದ್ದೇವೆ. ಎಲ್ಲವೂ ಸರಿಯೋಗುತ್ತದೆ. ಜಿಲ್ಲೆಯಲ್ಲಿ ರಾಜಕೀಯ ಪಾರ್ಟಿಗಳಲ್ಲಿರುವ ಸಮಸ್ಯೆ ಇದೆ. ವಿಧಾನಸಭಾ ಕ್ಷೇತ್ರದಲ್ಲಿ ಹತ್ತಕ್ಕೂ ಹೆಚ್ಚು ಬಲವಿರುವ ನಾಯಕರಿದ್ದಾರೆ. ಈ ಹಿನ್ನೆಲೆಯಲ್ಲಿ ನಾಯಕತ್ವದ ಕೊರತೆ ನಮ್ಮಲಿಇದೆ. ಭಾರತ ಮಾತೆ ಹಾಗೂ ಮೋದಿಗಾಗಿ ಎಲ್ಲವನ್ನೂ ಬದಿಗಿಟ್ಟು ಕೆಲಸ ಮಾಡುತ್ತಾರೆ ಎಂದು ಬಿಜೆಪಿ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ಕೊಟ್ಟರು.

Most Popular

To Top