News

ನೀವು ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಸರಿ, ಬಾಂಬ್ ಬೆಂಗಳೂರು ಮಾಡಬೇಡಿ ಎಂದ ಆರ್.ಅಶೋಕ್……!

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟದ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್‍.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಸಮಸ್ಯೆಯಿಲ್ಲ, ಬಾಂಬ್ ಬೆಂಗಳೂರು ಎಂಬ ಕಳಂಕ ಮಾತ್ರ ತರಬೇಡಿ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್‍.ಅಶೋಕ್ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟದ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ವಹಿಸಿಕೊಂಡ ಬಳಿಕ ಸಮಾಜಘಾತುಕ ಶಕ್ತಿಗಳಿಗೆ ರೆಕ್ಕೆ ಪುಕ್ಕ ಬಂದಿದೆ. ಶರ್ಟ್ ಗುಂಡಿ ಬಿಚ್ಚಿಕೊಂಡು ಎದೆ ಉಬ್ಬಿಸಿಕೊಂಡು ಓಡಾಡುತ್ತಿದ್ದಾರೆ. ಇವರಿಗೆ ದೇಶದ ಕಾನೂನು ಅನ್ವಯವಾಗಲ್ಲವೆಂಬಂತೆ ವರ್ತನೆ ಮಾಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಗಲಾಟೆ ಆದಾಗಲೂ ಸಹ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸರಣಿ ಕೊಲೆಗಳಾದಗಲೂ ಸಹ ಸರ್ಕಾರ ಸುಮ್ಮನಿದೆ. ಕೆಲವು ದಿನಗಳ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದರು. ಆದರೆ ಇದನ್ನು ಕಾಂಗ್ರೇಸ್ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡುತ್ತೇವೆ. ಸರ್ಕಾರ ಸಮಾಜಘಾತುಕರಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನೂ ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಪ್ರತಿಕ್ರಿಯೆ ನೀಡಿದ್ದು, ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಇಡೀ ಬೆಂಗಳೂರನ್ನು ಬೆಚ್ಚಿ ಬೀಳಿಸಿದೆ. ಈ ಸ್ಪೋಟದಲ್ಲಿ 9 ಮಂದಿಗೆ ಗಾಯಗಳಾಗಿವೆ. ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬಂದ ಬಳಿಕ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ವಿಧಾನ ಸೌಧದಲ್ಲಿ ಮೊನ್ನೆ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಅದರ ಮುಂದುವರೆದ ಭಾಗವಾಗಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಸಿದ್ದರಾಮಯ್ಯನವರೇ ಐಇಡಿ ಬ್ಲಾಸ್ಟ್ ಅಂತಾ ಒಪ್ಪಿಕೊಂಡಿದ್ದಾರೆ. ಸರ್ಕಾರಕ್ಕೆ ನೈತಿಕತೆ ಎಂಬುದು ಇದ್ದರೇ ಅಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದರು.

Most Popular

To Top