News

ಭಾರತರತ್ನ ಘೋಷಣೆ, ಭಾವುಕ ಪತ್ರ ಬರೆದು ಬಿಜೆಪಿ ಭೀಷ್ಮ, ನನ್ನ ದೇಶಕ್ಕಾಗಿ ನನ್ನ ಜೀವನ ಎಂದ ಅಡ್ವಾನಿ…..!

ಬಿಜೆಪಿಯ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗಿದೆ. ದೇಶದ ಅತ್ಯುನ್ನತ ನಾಗರೀಕ ಗೌರವಕ್ಕೆ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಲಾಗಿದೆ ಎಂದು ರಾಷ್ಟ್ರ ಹಾಗೂ ರಾಜ್ಯಗಳ ಬಿಜೆಪಿ ನಾಯಕರು ಸಂಭ್ರಮಿಸಿದ್ದಾರೆ. ಜೊತೆಗೆ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ವಿಪಕ್ಷ ನಾಯಕರೂ ಸಹ ಅಡ್ವಾಣಿಯವರಿಗೆ ಭಾರತ ರತ್ನ ಘೋಷಣೆ ಮಾಡಿರುವುದನ್ನು ಸ್ವಾಗತಿಸಿದ್ದಾರೆ. ಇದೀಗ ಅಡ್ವಾನಿ ರವರು ತಮ್ಮನ್ನು ಭಾರತ ರತ್ನಕ್ಕೆ ಆಯ್ಕೆ ಮಾಡಿರುವ ಬಗ್ಗೆ ಭಾವುಕ ಪತ್ರ ಬರೆದಿದ್ದಾರೆ.

ಭಾರತ ರತ್ನಕ್ಕೆ ಆಯ್ಕೆ ಮಾಡಿದ ಬಗ್ಗೆ ಎಲ್.ಕೆ.ಅಡ್ವಾನಿಯವರು ಭಾವುಕ ಪತ್ರವೊಂದನ್ನು ಬರೆದಿದ್ದಾರೆ. ಈ ಪತ್ರದಲ್ಲಿ ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಹಾಗೂ ಪಂಡಿತ್ ದೀನದಯಾಳ ಉಪಾಧ್ಯಾಯ ರವರನ್ನು ಸ್ಮರಿಸಿದ್ದಾರೆ. ನಾನು ಅತ್ಯಂತ ನಮ್ರತೆ ಮತ್ತು ಕೃತಜ್ಞತೆಯಿಂದ ನಾನು ಭಾರತವನ್ನು ಸ್ವೀಕರಿಸುತ್ತೇನೆ. ಇಂದು ನನಗೆ ಸಂದ ರತ್ನ ಎಂದು ಅಡ್ವಾನಿ ಪತ್ರದಲ್ಲಿ ತಿಳಿಸಿದ್ದಾರೆ. ಒಬ್ಬ ವ್ಯಕ್ತಿಯಾಗಿ ನನಗೆ ಮಾತ್ರ ಗೌರವವಲ್ಲ. ನನ್ನ ಜೀವನ ಉದ್ದಕ್ಕೂ ಸೇವೆ ಸಲ್ಲಿಸಲು ನಾನು ಶ್ರಮಿಸಿದಂತಹ ಆದರ್ಶಗಳು ಹಾಗೂ ತತ್ವಗಳಿಗೆ ಇದು ಸಲ್ಲುತ್ತದೆ. ನನ್ನ 14ನೇ ವಯಸ್ಸಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸೇರಿದಾಗಿನಿಂದ ನನ್ನ ಪ್ರೀತಿಯ ದೇಶಕ್ಕೆ ನನ್ನ ಜೀವನ ಸಮರ್ಪಣೆಯಾಗಿದೆ. ನನಗೆ ನಿಯೋಜಿಸಲಾದ ಪ್ರತಿಯೊಂದು ಕಾರ್ಯವನ್ನು ನಿಸ್ವಾರ್ಥದಿಂದ ಮಾಡಿದ್ದೇನೆ. ನನ್ನ ಸೇವೆಯಲ್ಲಿ ನಾನು ಯಾವುದೇ ಪ್ರತಿಫಲ ಹುಡುಕಲಿಲ್ಲ. ಇದಂ ನ ಮಮ್ ಎಂಬ ಧ್ಯೇಯ ವಾಕ್ಯ, ಈ ಜೀವನ ನನ್ನದಲ್ಲ. ನನ್ನ ಜೀವನ ನನ್ನ ರಾಷ್ಟ್ರಕ್ಕಾಗಿ ಮಾತ್ರ ಎಂಬುದು ನನ್ನ ನಂಬಿಕೆಯಾಗಿದೆ ಎಂದಿದ್ದಾರೆ.

ಇಂದು ನನ್ನ ಜೊತೆಗಿದ್ದ ಇಬ್ಬರು ವ್ಯಕ್ತಿಗಳನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ. ನನ್ನೊಂದಿಗೆ ನಿಕಟವಾಗಿ ಕೆಲಸ ಮಾಡಿದ ಗೌರವಾನ್ವಿತ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಹಾಗೂ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಬ್ಬರನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಲಕ್ಷಾಂತರ ಪಕ್ಷದ ಕಾರ್ಯಕರ್ತರಿಗೆ, ಸ್ವಯಂ ಸೇವಕರು ಹಾಗೂ ಇತರರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಸಾರ್ವಜನಿಕ ಜೀವನದಲ್ಲಿ ನನ್ನ ಪ್ರಯಾಣದ ಉದ್ದಕ್ಕೂ ನನ್ನೊಂದಿಗೆ ಕೆಲಸ ಮಾಡಿದ ಎಲ್ಲಾ ಸದಸ್ಯರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪತ್ರದ ಮೂಲಕ ಗೌರವ ಹಾಗೂ ಭಾವುಕ ಪತ್ರ ಬರೆದಿದ್ದಾರೆ. ಇದೇ ಸಮಯದಲ್ಲಿ ತನ್ನ ಪ್ರೀತಿಯ ಪತ್ನಿ ದಿ. ಕಮಲಾ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಡ್ವಾನಿ ಧನ್ಯವಾದ ಅರ್ಪಿಸಿದ್ದಾರೆ.

Most Popular

To Top