News

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದವನ್ನು ಸಿಐಡಿಗೆ ವರ್ಗಾವಣೆ…..!

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿತ್ತು.  ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಯಡಿಯೂರಪ್ಪ ಸೇರಿದಂತೆ ರಾಜ್ಯದ ವಿವಿಧ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಸಹಾಯ ಕೇಳಲು ಬಂದಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅಪ್ರಾಪ್ತೆಯ ತಾಯಿ ನೀಡಿದ ದೂರಿನಂತೆ ಯಡಿಯೂರಪ್ಪ ರವರ ವಿರುದ್ದ ಪೊಕ್ಸೋ ಕಾಯ್ದೆಯಡಿ ದೂರು ದಾಖಲಾಗಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಇನ್ನೂ ಈ ಕುರಿತು ಬೆಳಿಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್.ವೈ ಕೆಲವು ದಿನಗಳ ಹಿಂದೆ ಸಹಾಯ ಕೇಳಿ ಓರ್ವ ಮಹಿಳೆ ಬಂದಿದ್ದು, ಆಕೆಯನ್ನು ಕರೆಸಿ ಸಮಸ್ಯೆಯನ್ನು ಆಲಿಸಿ ಪೊಲೀಸ್ ಕಮಿಷನರ್‍ ಗೆ ನಾನೇ ಖುದ್ದು ಕರೆ ಮಾಡಿ ಮಹಿಳೆಯ ಸಮಸ್ಯೆಯನ್ನು ತಿಳಿಸಿ, ಆಕೆಗೆ ಸಹಾಯ ಮಾಡುವಂತೆ ಸೂಚನೆ ನೀಡಿದ್ದೆ. ಆದರೆ ಇದೀಗ ಆಕೆ ನನ್ನ ವಿರುದ್ದವೇ ದೂರು ನೀಡಿದ್ದಾಳೆ. ಇದೀಗ ಪೊಲೀಸರು ಆಕೆಯ ದೂರಿನಂತೆ ನನ್ನ ವಿರುದ್ದ ಪ್ರಕರಣ ದಾಖಲು ಮಾಡಿದ್ದಾರೆ.  ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹೇಳುವುದಿಲ್ಲ. ಕಾನೂನು ರೀತಿ ಎದುರಿಸುತ್ತೇನೆ ಎಂದು ಬಿ.ಎಸ್.ವೈ ತಿಳಿಸಿದ್ದಾರೆ.

ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್‍ ಮಾತನಾಡಿ, ಇನ್ನೂ ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಮಾಹಿತಿ ಸಿಕ್ಕಿದ್ದು, ತನಿಖೆಯ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದೆ. ಹಿರಿಯ ರಾಜಕಾರಣಿ ಹಾಗೂ ಮಾಜಿ ಸಿಎಂಗೆ ಸಂಬಂಧಿಸಿದ ವಿಚಾರವಾದ್ದರಿಂದ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಎಚ್ಚರಿಕೆಯಿಂದ ಮಾತನಾಡಬೇಕಿದೆ. ಈ ಪ್ರಕರಣದಲ್ಲಿ ಸಿಎಂ, ಡಿಸಿಎಂ ಅಥವಾ ನನಗಾಗಲೀ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಕಾನೂನಿನ ಪ್ರಕಾರ ಪೊಲೀಸರು ತನಿಖೆ ನಡೆಸಿ ಕ್ರಮ ಜರುಗಿಸುತ್ತಾರೆ ಎಂದಿದ್ದಾರೆ.

Most Popular

To Top