ತಮಿಳುನಾಡು ವಿರುದ್ದ ಹೇಳಿಕೆ ಕೊಟ್ಟ ಶೋಭಾ ಕರಂದ್ಲಾಜೆ ವಿರುದ್ದ ಪ್ರಕರಣ ದಾಖಲಿಸಿದ ಚುನಾವಣಾ ಆಯೋಗ….!

Follow Us :

ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತಮಿಳುನಾಡಿನಿಂದ ಬಂದು ಬೆಂಗಳೂರಿನಲ್ಲಿ ಬಾಂಬ್ ಇಡುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಆಕೆಯ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ. ಪ್ರತಿಭಟನಾ ಸ್ಥಳದಲ್ಲಿ ಆಕೆ ನೀಡಿದ ಹೇಳಿಕೆಯಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಪ್ರಕರಣದ ದಾಖಲಾಗಿದ್ದು, ಶೋಭಾ ವಿರುದ್ದ ಕೈಗೊಂಡ ಕ್ರಮಗಳ ಬಗ್ಗೆ 48 ಗಂಟೆಯೊಳಗೆ ವರದಿ ನೀಡಬೇಕೆಂದು ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತಮಿಳುನಾಡಿನಿಂದ ಬಂದು ಬೆಂಗಳೂರಿನಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ 2024 ಅಧಿಸೂಚನೆ ಘೋಷಣೆಯಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಶೋಭಾ ಸ್ಪರ್ಧೆ ಮಾಡಲಿದ್ದಾರೆ. ಇದೀಗ ಅವರು ತಮಿಳುನಾಡಿನ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಡಿಎಂಕೆ ದೂರು ನೀಡಿತ್ತು.

ಇನ್ನೂ ಶೋಭಾ ಕರಂದ್ಲಾಜೆ ನೀಡಿದ ವಿವಾದಾತ್ಮಕ ಹೇಳಿಕೆ ಕುರಿತು ಡಿಎಂಕೆ ದೂರು ನೀಡಿತ್ತು. ದೂರು ನೀಡಿದ ರಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ರವರಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ದ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.