News

ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಜಾರಿ ಮಾಡುತ್ತೇವೆ ಎಂದ ಕೇಂದ್ರ ಗೃಹ ಸಚಿವ ಅಮಿತ್ ಶಾ…..!

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA Act) ಜಾರಿ ಮಾಡುವ ಕುರಿತು ದೇಶದ ಅನೇಕ ರಾಜ್ಯಗಳಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಸಿಎಎ ಬಗ್ಗೆ ಚರ್ಚೆ ಶುರುವಾಗಿದೆ. ಮುಂಬರುವ 2024 ರ ಲೋಕಸಭೆ ಚುನವಾಣೆಗೂ ಮುನ್ನವೇ ಸಿಎಎ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನವೇ ಸಿಎಎ ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಕಳೆದ ಡಿಸೆಂಬರ್‍ 2019 ರಲ್ಲಿ ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಲಾಗಿತ್ತು. ಇದೀಗ ಲೋಕಸಭಾ ಚುನಾವಣೆಗೂ ಮುನ್ನಾ ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲು ಕ್ರಮ ವಹಿಸಲಾಗುವುದು. ಸಿಎಎ ಜಾರಿಗೊಳಿಸುವ ಭರವಸೆಯಿಂದ ಕಾಂಗ್ರೆಸ್ ಹಿಂದೆ ಸರಿಯುತ್ತಿದೆ. ಸಿಎಎ ಕಾಯ್ದೆಯನ್ನು ಕಾಂಗ್ರೇಸ್ ಸರ್ಕಾರ ಭರವಸೆ ನೀಡಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೆ ಒಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಅವರಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಭರವಸೆ ನೀಡಿತ್ತು ಎಂದು ಆರೋಪಿಸಿದರು.

ಸಿಎಎ ಪೌರತ್ವನ್ನು ಒದಗಿಸಲು ಜಾರಿ ಮಾಡಲಾಗುತ್ತದೆ ವಿನಃ ಯಾರ ಪೌರತ್ವನ್ನು ಕಸಿದುಕೋಳ್ಳಲು ಅಲ್ಲ. ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ನಮ್ಮ ಮುಸ್ಲೀಂ ಸಮುದಾಯವನ್ನು ಪ್ರಚೋದನೆ ಮಾಡಲಾಗುತ್ತಿದೆ. ಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ CAA ಯಾರ ಪೌರತ್ವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ನಮ್ಮ ಸಿಎಎ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವಂತಹ ಕಾಯ್ದೆಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಬಾಂಗ್ಲಾ, ಪಾಕಿಸ್ತಾನ, ಆಫ್ಘಾನಿಸ್ತಾನ ಕಡೆಯಿಂದ ಭಾರತಕ್ಕೆ ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಕ್ರಿಶ್ವಿಯನ್ನರು, ಪಾರ್ಸಿಗಳು, ಬೌದ್ದರು ಸೇರಿದಂತೆ ಮುಸ್ಲೀಮೇತರ ವಲಸರಿಗೆ ಭಾರತದ ಪೌರತ್ವ ನೀಡುವ ಗುರಿ ಹೊಂದಿದೆ ಎಂದು ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.

Most Popular

To Top