ಹೆಣ್ಣು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಚೈತ್ರ ರೈ

Follow Us :

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಾಧ ಕಲ್ಯಾಣ ಧಾರವಾಹಿ ಖ್ಯಾತಿಯ ನಟಿ ಚೈತ್ರ ರೈ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇತ್ತೀಚೆಗೆ ಇವರು ಗರ್ಭಿಣಿಯಾಗಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಶೇರ್ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ ಅಷ್ಟೇ ಶ್ರೀಮಂತ ಶಾಸ್ತ್ರದ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಆಗಸ್ಟ್ 16 ರಂದು ಚೈತ್ರ ರೈ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತೋಷದ ಸಮಾಚಾರವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ದೇವರು ನನಗೆ ಹೆಣ್ಣು ಮಗುವನ್ನು ಆಶೀರ್ವದಿಸಿದ್ದಾನೆ. ಇಂದು ಹಿಂದೆಂದು ಅನುಭವಿಸದ ಭಾವನೆಯಾಗಿದೆ. ನಾನು ನನ್ನ ಪತಿ ಕುಟುಂಬ ತುಂಬಾ ಸಂತೋಷವಾಗಿದ್ದೇವೆ ನಮ್ಮ ಸಣ್ಣ ಸಂತೋಷಕ್ಕೆ ಲೆಕ್ಕವಿಲ್ಲದಷ್ಟು ಆಶೀರ್ವಾದ ಮಾಡಿದಕ್ಕಾಗಿ ಧನ್ಯವಾದಗಳು ಎಂದು ಬರೆದುಕೊಂಡು ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

https://www.instagram.com/p/CSodwr3H-Wv/?utm_medium=copy_link

ಅಭಿಮಾನಿಗಳು ಇವರಿಗೆ ಕಮೆಂಟ್ಸ್ ಗಳ ಮೂಲಕ ಶುಭಾಶಯಗಳ ಸುರಿಮಳೆಯನ್ನೇ ಹರಿಸುತ್ತಿದ್ದಾರೆ. ತುಂಬು ಗರ್ಭಿಣಿಯಾಗಿದ್ದಾಗ ಬೇಬಿ ಬಮ್ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಸೀಮಂತ ಕಾರ್ಯಕ್ರಮದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು, ಇದೀಗ ತಾವು ಹೆಣ್ಣು ಮಗುವಿಗೆ ಜನ್ಮ ಕೊಟ್ಟಿರುವ ವಿಚಾರವನ್ನು ಅಂಚಿಕೊಂಡಿದ್ದಾರೆ.