News

ಚಿಕ್ಕಬಳ್ಳಾಪುರ ಜಿಲ್ಲಾ ಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಜ.17ರೊಳಗೆ ಅರ್ಜಿ ಸಲ್ಲಿಸಿ…..!

ಚಿಕ್ಕಬಳ್ಳಾಪುರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಗಾರ, ಚಾಲಕ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಡಿ.18 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಜ.17 ಕೊನೆಯ ದಿನಾಂಕವಾಗಿದೆ.

ಹೊರಡಿಸಲಾದ ಅಧಿಸೂಚನೆಯಂತೆ  ಶೀಘ್ರಲಿಪಿಗಾರ-8, ಟೈಪಿಸ್ಟ್​​ 14, ಟೈಪಿಸ್ಟ್​- ಕಾಪಿಸ್ಟ್​​ 6 ಹುದ್ದೆಗಳಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮೊ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರ ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವಂತಹ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಪಾಸ್ ಆಗಿರಬೇಕು. ಪ್ರೊಸೆಸ್ ಸರ್ವರ್‍-11, ಚಾಲಕ-1 ಹಾಗೂ ಜವಾನ-5 ಹುದ್ದೆಗಳಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು. ಚಾಲಕ ಹುದ್ದೆಗೆ ಚಾಲನಾ ಪರವಾನಿಗೆ ಹೊಂದಿರಬೇಕು.

ಇನ್ನೂ ವಯೋಮಿತಿ ವಿಚಾರಕ್ಕೆ ಬಂದರೇ, ಕನಿಷ್ಟ ವಯಸ್ಸು 18 ವರ್ಷ ಪೂರೈಸಿರಬೇಕು, ಗರಿಷ್ಟ 35 ವರ್ಷ ಆಗಿರಬೇಕು. ಪ.ಜಾತಿ/ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಸಲ್ಲಿಸಬೇಕಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ, ಉಳಿದ ಅಭ್ಯರ್ಥಿಗಳಿಗೆ 100 ರೂಪಾಯಿ ನಿಗಧಿಪಡಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು chikkaballapur.dcourts.gov.in/judges/online-recruitment/ ತಾಣಕ್ಕೆ ಭೇಟಿ ನೀಡಬಹುದಾಗಿದೆ.

Most Popular

To Top