News

ಭಾರತದಲ್ಲಿ ಎದುರಾಯ್ತಾ ಕೋವಿಡ್ 4ನೇ ಅಲೆ, ಕೋವಿಡ್ ಹೊಸ ತಳಿ JN.1 ಪ್ರಕರಣ ದೃಢ…..!

ಕೆಲವು ದಿನಗಳಿಂದ ಕೇರಳದಲ್ಲಿ ಕೋವಿಡ್ ರೂಪಾಂತರಿ JN.1 ತಳಿಯ ಆರ್ಭಟ ಜೋರಾಗಿದೆ. ಇಡೀ ಭಾರತದಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ ಕೇರಳದಲ್ಲೇ ಶೇ.90 ರಷ್ಟು ಪ್ರಕರಣ ಪತ್ತೆಯಾಗಿದೆ. ಕಳೆದ ಮಂಗಳವಾರ 115 ಪಾಸಿಟೀವ್ ಪ್ರಕರಣಗಳು ದಾಖಲಾಗಿದೆ ಎನ್ನಲಾಗಿದೆ. ಈ ರೂಪಾಂತರಿಯ ಮೊದಲ ಪ್ರಕರಣ ಪತ್ತೆಯಾಗಿದ್ದು ಕೇರಳದಲ್ಲಿಯೇ. ಈ ಬೆಳವಣಿಗೆ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ ಸಹ ಪ್ರಕಟಿಸಿದೆ. ಇದೀಗ ಭಾರತದಲ್ಲಿ ಕೋವಿಡ್ ನಾಲ್ಕನೇ ಅಲೆ ಶುರುವಾಗಲಿದೆಯೇ ಎಂಬ ಅನುಮಾನ ಮೂಡತೊಡಗಿದೆ.

ಕೋವಿಡ್ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಕರ್ನಾಟಕ ಸೇರಿದಂತೆ ಕೆಲವೊಂದು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯದ ಜೊತೆಗೆ ಮತಷ್ಟು ನಿಯಮಗಳನ್ನು ಜಾರಿ ಮಾಡಲಾಗಿದೆ. ಭಾರತದಲ್ಲಿ 21 ಕೋವಿಡ್ JN.1 ಪ್ರಕರಣ ಪತ್ತೆಯಾಗಿದೆ. ಈ ಪೈಕಿ 19 ಪ್ರಕರಣಗಳು ಗೋವಾದಲ್ಲಿ ಪತ್ತೆಯಾಗಿದೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಇನ್ನೂ ದೇಶದಲ್ಲಿ ಈ ರೂಪಾಂತರಿ ಕ್ಷಿಪ್ರಗತಿಯಲ್ಲಿ ಹರಡುವಂತಹ ಸಾಧ್ಯತೆಯಿದ್ದು, ಈ ಕುರಿತು ಜನರು ಎಚ್ಚರಿಕೆ ವಹಿಸಬೇಕು ಎಂದು ಎಚ್ಚರಿಕೆ ಸಹ ನೀಡಿತ್ತು. ಇದೀಗ ಕೋವಿಡ್ ರೂಪಾಂತರಿ ಪತ್ತೆಯಾಗಿರುವುದು ದೇಶದ ವಾಸಿಗಳ ಆತಂಕಕ್ಕೆ ಕಾರಣವಾಗಿದೆ.

ಕೋವಿಡ್ ರೂಪಾಂತರಿ ಹರಡುವಿಕೆ ಹೆಚ್ಚಾಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಮಹತ್ವದ ಸಭೆ ಕರೆದು ಸದ್ಯದ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದಾರೆ. ಈ ರೂಪಾಂತರಿಯನ್ನು ಎದುರಿಸಲು ಆರೋಗ್ಯ ಇಲಾಖೆ ಸಜ್ಜಾಗಬೇಕು. ಜನರಿಗೆ ಸೂಕ್ತ ಚಿಕಿತ್ಸೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಿಗಬೇಕು. ಆಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್‍, ಬೆಡ್, ಔಷಧಿಗಳು ಸೇರಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಇನ್ನೂ ಹೊಸ ರೂಪಾಂತರಿಯ ಬಗ್ಗೆ ಜನತೆ ಆತಂಕ ಪಡುವ ಅವಶ್ಯಕತೆಯಿಲ್ಲ ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಜ್ಞರು ಸಲಹೆ ನೀಡಿದ್ದಾರೆ.

Most Popular

To Top