ದೇಶದಲ್ಲಿ ಮತ್ತೆ ಚಂಡಮಾರುತದ ಅಬ್ಬರ, ಆ ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ….!

Follow Us :

ಕೆಲವು ದಿನಗಳ ಹಿಂದೆಯಷ್ಟೆ ಮೈಚಾಂಗ್ ಚಂಡಮಾರುತದ ಧಾಳಿಗೆ ತಮಿಳುನಾಡು, ಆಂಧ್ರ ಪ್ರದೇಶ ಸೇರಿದಂತೆ ಅನೇಕ ಕಡೆ ಭಾರಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಅನೇಕ ಜನವಸತಿ ಪ್ರದೇಶಗಳು ನೀರಿನಿಂದ ಆವೃತಗೊಂಡಿದ್ದು, ಊಟ ವಸತಿಗಾಗಿ ಜನ ಜಾನುವಾರುಗಳು ಪರದಾಡುವಂತಾಗಿತ್ತು. ಸದ್ಯ ಮತ್ತೊಮ್ಮೆ ಚಂಡಮಾರುತ ಅಪ್ಪಳಿಸಿದ್ದು, ದೇಶದ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಚಳಿಗಾಲ ಆರಂಭವಾಗಿದ್ದು, ದೇಶದ ಹಲವು ಭಾಗಗಳಲ್ಲಿ ಇನ್ನೂ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಮೈಚಾಂಗ್ ಚಂಡಮಾರುತದ ಬಳಿಕ ಮತ್ತೊಂದು ಚಂಡಮಾರುತ ಅಪ್ಪಳಿಸಲಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ಮಳೆ, ಆಲಿಕಲ್ಲು ಮಳೆ, ದಟ್ಟವಾದ ಮಂಜು ಬೀಳುವ ಸಾಧ್ಯತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಅರೇಬಿಯನ್ ಸಮುದ್ರ ಹಾಗೂ ಮಾಲ್ಡೀವ್ಸ್ ಪ್ರದೇಶದಲ್ಲಿ ಚಂಡಮಾರುತ ಕಾಣಿಸಿಕೊಳ್ಳಲಿದ್ದು, ಇದರಿಂದಾಗಿ ಮುಂದಿನ ನಾಲ್ಕೈದು ದಿನಗಳ ಕಾಲ ಕೇರಳ, ತಮಿಳುನಾಡು, ಪುದುಚೆರಿ, ಕಾರೈಕಲ್ ಹಾಗೂ ಲಕ್ಷದ್ವೀಪಗಳಲ್ಲಿ ಗುಡುಗು ಸಮೇತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಜಮ್ಮು ಕಾಶ್ಮೀರಾ, ಲಡಾಕ್, ಗಿಲ್ಗಿಟ್, ಬಾಲ್ಚಿಸ್ತಾನ್, ಹಿಮಾಚಲ ಪ್ರದೇಶ, ಉತ್ತರಾಖಂಡ ಭಾಗಗಳಲ್ಲಿ ಹಿಮಪಾತ ಅಥವಾ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಸ್ಕೈಮೇಟ್ ಹವಾಮಾನದ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ ಸಾಧಾರಣ ಹಾಗೂ ಕೆಲವೊಂದು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಇನ್ನೂ ಕರಾವಳಿ ಹಾಗೂ ದಕ್ಷಿಣ ಒಳ ಕರ್ನಾಟಕದಲ್ಲೂ ಸಹ ಕೆಲವೊಂದು ಕಡೆ ಹಗುರ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದೂ ಸಹ ಹವಾಮಾನ ಇಲಾಖೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.